ಧಾರವಾಡ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯ ಮೇಲೆ ಪೊಲೀಸರು ನಿನ್ನೆ ರಾತ್ರಿ ಇಲ್ಲಿನ ಹೊಯ್ಸಳ ನಗರದಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಪ ನಗರ ಠಾಣೆಯ ಇನಸ್ಪೆಕ್ಟರ್ ರಮೇಶ ಹೂಗಾರ,ಮಹಿಳಾ ಠಾಣೆಯ ಅಧಿಕಾರಿಗಳು ದಾಳಿ ನಡೆಸಿದ್ದರು.
ದಾಳಿ ಸಂದರ್ಭದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರು ಮತ್ತು ಪುರುಷನೋರ್ವನನ್ನು ಬಂಧಿಸಿದ್ದಾರೆ.
ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ
Laxmi News 24×7