Breaking News

ಪ್ರತಿ ಜಿಲ್ಲೆಯಲ್ಲಿ ಕೊರೋನಾ ತಪಾಸಣಾ ಕೇಂದ್ರ ಸ್ಥಾಪಿಸಿ ರಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸುವಂತೆ ದೇಶಪಾಂಡೆ ಆಗ್ರಹ

Spread the love

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶೀಘ್ರವಾಗಿ ತಪಾಸಣೆ ನಡೆಸಲು ಈ ತಿಂಗಳ 30ರ ಒಳಗಾಗಿ ಪ್ರತಿ ಜಿಲ್ಲೆಗೊಂದು ಕೋವಿಡ್-19 ಪ್ರಯೋಗಾಲಯ ಹಾಗೂ ರಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ನಿಯೋಗದೊಂದಿಗೆ ಸಿಎಂ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಅವರು ಸರ್ಕಾರವು ಕಟ್ಟಡ ಕಾರ್ಮಿಕರಿಗೆ ಸಹಾಯಧನ ಘೋಷಣೆ ಮಾಡಿದೆ. ಆದರೆ ಇತರೆ ಕಾರ್ಮಿಕರ ಬದುಕು ಸಂಕಷ್ಟದಲ್ಲಿದ್ದು ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೂ ಸಹಾಯಧನ ಘೋಷಣೆ ಮಾಡಬೇಕು ಎಂದರು.

ಅಲ್ಲದೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಸಣ್ಣ, ಸೂಕ್ಷ್ಮ, ಹಾಗೂ ಮಧ್ಯಮ ಕೈಗಾರಿಕಾ ಘಟಕಗಳು ಲಾಕ್ದೌನ್ ನಿಂದಾಗಿ ತೀವ್ರ ಸಂಕಷ್ಟದಲ್ಲಿವೆ. ಹೀಗಾಗಿ ಈ ಘಟಕಗಳ 6 ತಿಂಗಳ ಆಸ್ತಿ ತೆರಿಗೆ, ನೀರಿನ ತೆರಿಗೆ ಹಾಗೂ ನಿರ್ದಿಷ್ಟ ವಿದ್ಯುತ್ ಶುಲ್ಕವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಗೋವಾದಲ್ಲಿ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಮುಖ್ಯಮಂತ್ರಿಗಳು ಗೋವಾ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿ ಅವರಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಜಿಲ್ಲಾಡಳಿತದ ಮೂಲಕ ಅವರ ಆರೋಗ್ಯದ ಸೂಕ್ತ ತಪಾಸಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ