Breaking News

ಲೋಕಸಭೆಯಲ್ಲಿ ಮಸೂದೆ ಕುರಿತು ಚರ್ಚೆಗೆ ಕಾಂಗ್ರೆಸ್ ಒತ್ತಾಯಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಗಲಾಟೆ ಶುರು

Spread the love

ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಶುರುವಾಗಿದೆ. ಅಧಿವೇಶನದ ಮೊದಲ ದಿನವೇ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವ ಮಸೂದೆಯನ್ನು ಅಂಗೀಕರಿಸಲಾಗಿದೆ.

ಇದರೊಂದಿಗೆ ಲೋಕಸಭೆಯ ಕಲಾಪವನ್ನು ಮುಂದೂಡಲಾಗಿದೆ.

ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೃಷಿ ಕಾನೂನುಗಳನ್ನು ಹಿಂಪಡೆಯುವ ಕುರಿತು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದರು. ಕೆಲವೇ ಸಮಯದಲ್ಲಿ ಕೃಷಿ ಕಾನೂನು ಹಿಂಪಡೆಯುವ ಮಸೂದೆಯನ್ನು ಲೋಕಸಭೆಯು ಅಂಗೀಕರಿಸಲಾಯ್ತು. ಲೋಕಸಭೆಯಲ್ಲಿ ಮಸೂದೆ ಕುರಿತು ಚರ್ಚೆಗೆ ಕಾಂಗ್ರೆಸ್ ಒತ್ತಾಯಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಗಲಾಟೆ ಶುರುವಾಗಿತ್ತು,

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಸೋಮವಾರ ಸಭೆ ಸೇರಿ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆ ಸೇರಿದಂತೆ ಹಲವು ವಿಷಯಗಳ ಕಾರ್ಯತಂತ್ರ ಕುರಿತು ಚರ್ಚಿಸಿದ್ದರು. ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ಮಾತನಾಡಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಅನ್ನದಾತರ ಹೆಸರು ಇಂದು ಸಂಸತ್ತಿನಲ್ಲಿ ಮೊಳಗಬೇಕಿದೆ ಎಂದಿದ್ದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ

Spread the love ಬೆಳಗಾವಿಯಲ್ಲಿ ಭಾರಿ ಮಳೆಗೆ ಮನೆ ಕುಸಿತ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಬೆಳಗಾವಿಯಲ್ಲಿ ಒಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ