Breaking News

ರಾಸಲೀಲೆ ವಿಡಿಯೋ ಪತಿಗೆ ಕಳಿಸಿದ್ದ ಅತ್ಯಾಚಾರ ಆರೋಪಿಗೆ ಜಾಮೀನು, ಅಕ್ರಮ ಸಂಬಂಧಕ್ಕೆ ಇಬ್ಬರ ಒಪ್ಪಿಗೆ ಇತ್ತು ಎಂದ ಹೈಕೋರ್ಟ್

Spread the love

ಬೆಂಗಳೂರು: ವಿವಾಹಿತೆಯಾಗಿರುವ ಸಂತ್ರಸ್ತೆ ಮಹಿಳೆಯು ಬೆಳಗಿನ ಜಾವ ಆರೋಪಿಗೆ ವಿಡಿಯೊ ಕರೆ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಸಂತ್ರಸ್ತೆಯ ಖಾಸಗಿ ಅಂಗಗಳ ಚಿತ್ರಗಳನ್ನು ಆತ ಸೆರೆ ಹಿಡಿದಿದ್ದಾನೆ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ, ಅತ್ಯಾಚಾರ ಆರೋಪಿಗೆ ಜಾಮೀನು ನೀಡಿದೆ.

 

ಕೊಪ್ಪಳ ಜಿಲ್ಲೆಯ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯವು ಆಗಸ್ಟ್ ನಲ್ಲಿ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಆರೋಪಿ ಬಸನಗೌಡ ಅಲಿಯಾಸ್ ಬಸವರಾಜ್ ಅವರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ನೇತೃತ್ವದ ಏಕಸದಸ್ಯ ಪೀಠ, ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

‘ಈ ಪ್ರಕರಣದಲ್ಲಿ ಆರೋಪಿ ಮತ್ತು ಮಹಿಳೆಯ ನಡುವಿನ ಲೈಂಗಿಕ ಸಂಪರ್ಕ ಸಹಮತದಿಂದ ಕೂಡಿದೆ. ಮಹಿಳೆಯೇ ಸ್ವತಃ ತನ್ನ ದೇಹದ ಖಾಸಗಿ ಭಾಗಗಳನ್ನು ಆರೋಪಿಗೆ ಪ್ರದರ್ಶಿಸಿದ್ದಾಳೆ. ಇದು ಆಕೆಯ ಒಪ್ಪಿಗೆಯ ಪ್ರದರ್ಶನ ಆಗಿರುವುದರಿಂದ ಆರೋಪಿಗೆ ಜಾಮೀನು ನೀಡಲಾಗುತ್ತಿದೆ’ ಎಂದು ಹೈಕೋರ್ಟ್ ಹೇಳಿದೆ.

‘ಒಂದು ಲಕ್ಷ ರೂಪಾಯಿಯ ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆಯನ್ನು ಸಂಬಂಧಪಟ್ಟ ನ್ಯಾಯಾಲಯಕ್ಕೆ ನೀಡಬೇಕು. ಸಾಕ್ಷಿಗಳನ್ನು ನಾಶ ಮಾಡಬಾರದು. ನ್ಯಾಯಾಲಯ ಸೂಚಿಸಿದಾಗ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಿ’ ಆರೋಪಿಗೆ ನ್ಯಾಯಾಲಯವು ಜಾಮೀನು ನೀಡಿದೆ.

ಆರೋಪಿ ಬಸನಗೌಡ ತನ್ನ ಹಳೆಯ ಗೆಳತಿ ಮದುವೆಯಾದ ಮೇಲೂ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಇರಿಸಿಕೊಂಡಿದ್ದು, ಮದುವೆಗೂ ಮುನ್ನ ಅಂದರೆ, 2018ರ ಅಂತ್ಯದಿಂದಲೂ ಮಹಿಳೆಯು ಆರೋಪಿ ಜೊತೆ ಹೊಲದಲ್ಲಿ ಆಗಾಗ್ಗೆ ಲೈಂಗಿಕ ಸಂಪರ್ಕ ನಡೆಸುತ್ತಿದ್ದರು. ಮದುವೆಯಾದ ಮೇಲೂ ಆರೋಪಿ ಆಕೆಯೊಂದಿಗೆ ಲೈಂಗಿಕ ಸಂಪರ್ಕ ಸಾಧಿಸುತ್ತಿದ್ದ. ಕೆಲವೊಮ್ಮೆ ಬೆಳಗಿನ ಜಾವ 4ರಿಂದ 5 ಗಂಟೆಯ ಮಧ್ಯದಲ್ಲಿ ವಿಡಿಯೊ ಕಾಲ್‌ ಮಾಡಿ ಆಕೆಯ ದೇಹದ ಖಾಸಗಿ ಭಾಗಗಳನ್ನು ನೋಡುತ್ತಿದ್ದ.

ಏತನ್ಮಧ್ಯೆ, 2021ರ ಮಾರ್ಚ್‌ ತಿಂಗಳಲ್ಲಿ ಮಹಿಳೆ 15 ದಿನಗಳ ಕಾಲ ಆರೋಪಿಯೊಂದಿಗಿನ ಫೋನ್ ಸಂಪರ್ಕ ಕಡಿತಗೊಳಿಸಿದ್ದಳು. ಇದರಿಂದ ಕುಪಿತನಾದ ಆರೋಪಿ ತನ್ನ ಮೊಬೈಲ್‌ನಲ್ಲಿ ಸೇವ್‌ ಮಾಡಿ ಇರಿಸಿಕೊಂಡಿದ್ದ ಆಕೆಯ ನಗ್ನ ದೇಹದ ಖಾಸಗಿ ಭಾಗಗಳ ಸ್ಕ್ರೀನ್‌ ಶಾಟ್‌ಗಳನ್ನು ಅವಳ ಗಂಡನಿಗೇ ರವಾನಿಸಿದ್ದ. ಈ ಸಂಬಂಧ ದೂರು ದಾಖಲಾಗಿತ್ತು. ಪೊಲೀಸರು ಆರೋಪಿಯನ್ನು 2021ರ ಏಪ್ರಿಲ್‌ ಮೊದಲ ವಾರದಲ್ಲಿ ಬಂಧಿಸಿದ್ದರು.


Spread the love

About Laxminews 24x7

Check Also

ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ

Spread the love ರಾಮನಗರ: ಎಚ್‌.ಡಿ. ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದೇ ನಾನು. ಇದೀಗ ನಾನು 2 ಬಾರಿ ಮುಖ್ಯಮಂತ್ರಿಯಾದೆ ಎಂದು ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ