Breaking News

ಗಿಫ್ಟ್‌ ಡೀಡ್‌ ವರ್ಗಾವಣೆ: ಪೂರ್ವಾನ್ವಯ ಸಲ್ಲ

Spread the love

ಬೆಂಗಳೂರು: ‘ಗಿಫ್ಟ್ ಡೀಡ್ ಮೂಲಕ ಮಗಳಿಗೆ ನೀಡಿದ್ದ ಆಸ್ತಿ ವರ್ಗಾವಣೆ‌ ರದ್ದುಗೊಳಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ, ಹೈಕೋರ್ಟ್‌, ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ಹವಣೆ ಮತ್ತು ಕಲ್ಯಾಣ ಕಾಯ್ದೆ-2007ರ ಕಲಂ 23(1) ನಿಬಂಧನೆಗಳನ್ನು, ಕಾಯ್ದೆ ಜಾರಿಯಾದ ನಂತರದ ಅವಧಿಯಲ್ಲಿ ಅನ್ವಯಸಬಹುದೇ ಹೊರತು, ಪೂರ್ವಾನ್ವಯ ಮಾಡಲಾಗದು’ ಎಂದು ಅಭಿಪ್ರಾಯಪಟ್ಟಿದೆ.

 

ಈ ಸಂಬಂಧ ತುಮಕೂರಿನ ಕಮಲಮ್ಮ ಎಂಬುವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ಹವಣೆ ಮತ್ತು ಕಲ್ಯಾಣ ಕಾಯ್ದೆ-2007ರಲ್ಲಿ ಜಾರಿಗೆ ಬಂದಿದೆ. ಆದರೆ, ಅರ್ಜಿದಾರ ಕಮಲಮ್ಮ ತಮ್ಮ ಸ್ಥಿರಾಸ್ತಿಯನ್ನು 2005ರಲ್ಲಿ ಮಗಳಿಗೆ ಗಿಫ್ಟ್ ಡೀಡ್ ಮೂಲಕ ವರ್ಗಾವಣೆ ಮಾಡಿದ್ದಾರೆ. ಕಾಯ್ದೆಯ ಕಲಂ 23(1) ನಿಬಂಧನೆಗಳು ಕಾಯ್ದೆ ಜಾರಿಗೆ ಬಂದ ವರ್ಷ 2007ರ ನಂತರದ ಪ್ರಕರಣಗಳಿಗೆ ಅನ್ವಯಿಸುತ್ತದಯೇ ಹೊರತು ಅದಕ್ಕಿಂತ ಮುಂಚಿನ ವ್ಯವಹಾರಗಳಿಗೆ ಅಲ್ಲ’ ಎಂದು ನ್ಯಾಯಪೀಠ ಹೇಳಿದೆ.

‘ಗಿಫ್ಟ್ ಡೀಡ್ ಮತ್ತು ಮಾರಾಟ ರದ್ದುಪಡಿಸಿದ್ದ ಉಪವಿಭಾಗಾಧಿಕಾರಿ ಆದೇಶವನ್ನು ಅಸಿಂಧುಗೊಳಿಸಿರುವ ಏಕಸದಸ್ಯ ನ್ಯಾಯಪೀಠದ ತೀರ್ಪು ಸರಿಯಾಗಿದೆ. ಇದರಲ್ಲಿ ಮಧ್ಯ ಪ್ರವೇಶಿಸುವ ಯಾವ ಅಂಶಗಳೂ ಕಾಣುತ್ತಿಲ್ಲ’ ಎಂದು ವಿಭಾಗೀಯ ನ್ಯಾಯಪೀಠ ಹೇಳಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ