Breaking News

ಅಭಿಮಾನಿಗಳಿಗೆ ಇಲ್ಲಿ ‘ಕಿಚ್ಚ’ನೇ ದೇವರು.. ಸುದೀಪ್​ಗೆ ಗುಡಿ ನಿರ್ಮಿಸುತ್ತಿರುವ ರಾಯಚೂರು ಫ್ಯಾನ್ಸ್​

Spread the love

ರಾಯಚೂರು: ಚಲನಚಿತ್ರ ನಟರನ್ನು ಆರಾಧಿಸಿ ಅವರ ಹೆಸರಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರ ಶ್ರೇಯೋಭಿವೃದ್ಧಿ ಪ್ರಾರ್ಥಿಸುವುದು ಅಭಿಮಾನಿಗಳು ನಡೆಸಿಕೊಂಡು ಬಂದಿರುವ ಕಾರ್ಯವಾಗಿದೆ. ಆದರೆ ರಾಯಚೂರಲ್ಲಿ ತಮ್ಮ ನೆಚ್ಚಿನ ನಟನ ದೇವಾಲಯ ನಿರ್ಮಾಣಕ್ಕೆ ಅಭಿಮಾನಿಗಳು ಮುಂದಾಗಿದ್ದಾರೆ.

ಕನ್ನಡ ಸೇರಿ ಹಲವು ಭಾಷೆಯ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಪುತ್ಥಳಿ ಕೆತ್ತಿಸಿರುವ ಅಭಿಮಾನಿಗಳು ಅವರಿಗಾಗಿ ದೇವಾಲಯ ನಿರ್ಮಾಣ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ ಮೊದಲು ಮಾನವನಾಗು ಎಂಬ ಸಂಘಟನೆ ಹುಟ್ಟುಹಾಕಿ ಆ ಮೂಲಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅದರಂತೆ ಅವರ ಅಭಿಮಾನಿಗಳು ಸಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಈಗ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕುರಕೂಂದ ಗ್ರಾಮದಲ್ಲಿ ಸುದೀಪ್ ಅಭಿಮಾನಿಗಳು ದೇವಾಲಯ ನಿರ್ಮಿಸುತ್ತಿದ್ದು, ಈಗಾಗಲೇ ನಾಲ್ಕೂವರೆ ಅಡಿ ಎತ್ತರದ ಪುತ್ಥಳಿ ತಯಾರಾಗಿದ್ದು, ದೇವಾಲಯ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಬಾಕಿ ಉಳಿದ ಕಾಮಗಾರಿಯನ್ನ ಈ ವರ್ಷದೊಳಗೆ ಮುಗಿಸಿ ನಟ ಸುದೀಪ್ ಅವರ ಕೈಯಿಂದಲೇ ಉದ್ಘಾಟನೆ ಮಾಡಿಸುವ ಮಹದಾಸೆ ಹೊಂದಿದ್ದಾರೆ.

ದೇವಾಲಯ ನಿರ್ಮಾಣಕ್ಕಾಗಿ ಶರಣಬಸವ ಎನ್ನುವರು ಅಂದಾಜು 35×40 ಅಡಿಯಷ್ಟು ಭೂಮಿಯನ್ನು ಉಚಿತವಾಗಿ ನೀಡಿದ್ದಾರೆ. ಜೊತೆಗೆ ಗ್ರಾಮಸ್ಥರೇ ಹಣ ಒಟ್ಟುಗೂಡಿಸಿ ದೇವಾಲಯ ನಿರ್ಮಾಣ ಕಾರ್ಯ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ