Breaking News
Home / ಜಿಲ್ಲೆ / ನಾಲ್ವರ ಆತ್ಮಹತ್ಯೆ ಪ್ರಕರಣದ: ಪತ್ರಕರ್ತ ಹಲ್ಲೇಗೆರೆ ಶಂಕರ್ ಹಾಗೂ ಆತನ ಇಬ್ಬರು ಅಳಿಯಂದಿರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ

ನಾಲ್ವರ ಆತ್ಮಹತ್ಯೆ ಪ್ರಕರಣದ: ಪತ್ರಕರ್ತ ಹಲ್ಲೇಗೆರೆ ಶಂಕರ್ ಹಾಗೂ ಆತನ ಇಬ್ಬರು ಅಳಿಯಂದಿರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ

Spread the love

ಬೆಂಗಳೂರು: ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಬ್ಯಾಡರಹಳ್ಳಿ ಪೊಲೀಸರು, ಪತ್ರಕರ್ತ ಹಲ್ಲೇಗೆರೆ ಶಂಕರ್ ಹಾಗೂ ಆತನ ಇಬ್ಬರು ಅಳಿಯಂದಿರ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ತಿಗಳರಪಾಳ್ಯದಲ್ಲಿ ವಾಸವಿದ್ದ ಭಾರತಿ (51), ಅವರ ಮಕ್ಕಳಾದ ಸಿಂಚನಾ (34), ಸಿಂಧುರಾಣಿ (33) ಹಾಗೂ ಮಧುಸಾಗರ್ (25) ಆತ್ಮಹತ್ಯೆ ಮಾಡಿಕೊಂಡಿದ್ದರು

ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಭಾರತಿ ಅವರ ಪತಿ ಶಂಕರ್ ಹಾಗೂ ಅಳಿಯಂದಿರನ್ನು ಬಂಧಿಸಲಾಗಿತ್ತು. ಮೂವರು ಸದ್ಯ ಜೈಲಿನಲ್ಲಿದ್ದಾರೆ.

‘ಮನೆಯ ಪ್ರತ್ಯೇಕ ಕೊಠಡಿಯಲ್ಲಿ ನಾಲ್ವರೂ ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳದಲ್ಲಿ ಸಿಕ್ಕ ಪುರಾವೆಗಳು ಹಾಗೂ ಮೃತರು ಬರೆದಿದ್ದ ಮರಣಪತ್ರಗಳನ್ನು ಆಧರಿಸಿ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳನ್ನು ಸಂಗ್ರಹಿಸಿ 305 ‍ಪುಟಗಳ ದೋಷಾರೋಪ ಪಟ್ಟಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಶಂಕರ್ ಹಾಗೂ ಅಳಿಯಂದಿರು, ಆತ್ಮಹತ್ಯೆಗೆ ಪ್ರಚೋದನೆ ನೀಡಿರುವುದು ತನಿಖೆಯಿಂದ ಗೊತ್ತಾಗಿದೆ. ಅದಕ್ಕೆ ಸಂಬಂಧಪಟ್ಟ 45 ಸಾಕ್ಷಿಗಳ ಹೇಳಿಕೆಗನ್ನು ಆರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ. ಮರಣಪತ್ರಗಳನ್ನೂ ಉಲ್ಲೇಖಿಸಲಾಗಿದೆ’ ಎಂದೂ ತಿಳಿಸಿವೆ.

ಮಗುವಿನ ಕೊಲೆ ತನಿಖೆ ಪ್ರಗತಿಯಲ್ಲಿ: ‘ಆತ್ಮಹತ್ಯೆಗೂ ಮುನ್ನ ಸಿಂಧುರಾಣಿ, ತಮ್ಮ ಒಂಬತ್ತು ತಿಂಗಳ ಮಗುವನ್ನು ಕೊಲೆ ಮಾಡಿದ್ದರು. ಮನೆಯ ಬೆಡ್‌ ಮೇಲೆ ಮಗುವಿನ ಮೃತದೇಹ ಸಹ ಸಿಕ್ಕಿತ್ತು. ಈ ಬಗ್ಗೆ ಸಿಂಧುರಾಣಿ ಹಾಗೂ ಇತರರ ವಿರುದ್ಧ ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ’ ಎಂದೂ ಪೊಲೀಸ್ ಮೂಲಗಳು ಮಾಹಿತಿ ನೀಡಿದೆ.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ