Breaking News

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನಕ್ಕೂ ಒಮಿಕ್ರಾನ್ ಕರಿ ನೆರಳು

Spread the love

ವಿದೇಶಗಳಲ್ಲಿ ಹೊಸ ತಳಿ ಕೊರೊನಾ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇಡೀ ವಿಶ್ವದಾಧ್ಯಂತ ಮತ್ತೆ ಆತಂಕ ಸೃಷ್ಟಿಯಾಗಿದೆ. ಅಲ್ಲದೇ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನಕ್ಕೂ ಒಮಿಕ್ರಾನ್ ಕರಿ ನೆರಳು ಬಿದ್ದಿದೆ.

ಹೌದು ಡಿಸೆಂಬರ್ 13ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಎಲ್ಲ ರೀತಿಯ ಸಿದ್ಧತೆ ಕೂಡ ಆರಂಭವಾಗಿದೆ. ಆದರೆ ಇದೀಗ ವಿದೇಶಗಳಲ್ಲಿ ಒಮಿಕ್ರಾನ್ ಮತ್ತೆ ಹಾಗೂ ರಾಜ್ಯದಲ್ಲಿ ಅಲ್ಲಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ರದ್ಧಾಗುತ್ತಾ ಎಂಬ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ಸಂಬಂಧ ಧಾರವಾಡದಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಿಎಂ ಬೊಮ್ಮಾಯಿ ಅವರು ಈ ಬಗ್ಗೆ ನೋಡೋಣ ವಿಚಾರಣೆ ಮಾಡುತ್ತೇನೆ ಅಂತಾ ಅಷ್ಟೇ ಹೇಳಿದ್ದಾರೆ.

ಒಟ್ಟಿನಲ್ಲಿ ಕಳೆದ ಎರಡು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಈ ಬಾರಿಯಾದ್ರೂ ನಡೆಯುತ್ತದೆ ಎಂದು ಆಸೆಗಣ್ಣಿನಿಂದ ಈ ಭಾಗದ ಜನ ಕಾಯುತ್ತಿದ್ದಾರೆ. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಎಂಬ ಆಗ್ರಹ ಕೇಳಿ ಬರುತ್ತಿದೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ