Breaking News

ಪಡಿತರ ಅಂಗಡಿಗಳಲ್ಲಿ ಮಿನಿ ಎಲ್‌ಪಿಜಿ ಸಿಲಿಂಡರ್‌ : ಕೇಂದ್ರ ಸಚಿವ ಪಿಯೂಷ್ ಗೋಯಲ್ ಘೋಷಣೆ

Spread the love

ನವದೆಹಲಿ: ಮಿನಿ ಎಲ್ ಪಿಜಿ ಸಿಲಿಂಡರ್ ಮಾರಾಟ ಸೇರಿದಂತೆ ಜನರಿಗೆ ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಪಡಿತರ ಅಂಗಡಿಗಳಲ್ಲಿ ಆಹಾರ ಧಾನ್ಯಗಳ ಜತೆಗೆ ಇತರೆ ವಸ್ತುಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ . ಪಡಿತರ ಅಂಗಡಿಗಳ ಮೂಲಕ ಮಿನಿ ಎಲ್‌ಪಿಜಿ ಸಿಲಿಂಡರ್‌ಗಳ ಮಾರಾಟಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

 

ಪಡಿತರ ಅಂಗಡಿಗಳಲ್ಲಿ ಮಿನಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ಮಾರಾಟ ಮಾಡುವ ಕುರಿತು ಈಗಾಗಲೇ ತೈಲ ಮಾರುಕಟ್ಟೆ ಕಂಪನಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಸಚಿವರು ಹೇಳಿದರು. ಆದರೆ, ಪಡಿತರ ಅಂಗಡಿಗಳ ನಿರ್ವಹಣೆ ಸಂಪೂರ್ಣವಾಗಿ ರಾಜ್ಯಗಳ ಕೈಯಲ್ಲಿದೆ. ಆಸಕ್ತ ರಾಜ್ಯಗಳು ಪಡಿತರ ಅಂಗಡಿಗಳಲ್ಲಿ ಮಿನಿ-ಎಲ್‌ಪಿಜಿ ನೀಡುತ್ತಿವೆ ಎಂದು ಅವರು ಬಹಿರಂಗಪಡಿಸಿದರು. ವೈಎಸ್ಸಾರ್ಸಿಪಿ ಸಂಸದರಾದ ಕೋಟಗಿರಿ ಶ್ರೀಧರ್, ಎನ್.ಕೆ. ರೆಡ್ಡೆಪ್ಪ ಕೇಳಿದ ಪ್ರಶ್ನೆಗಳಿಗೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಉತ್ತರಿಸಿದರು.


Spread the love

About Laxminews 24x7

Check Also

ಆಟೊ ಬುಕ್ ಮಾಡಿ ಬಳಿಕ ರದ್ದು ಮಾಡಿದಕ್ಕೆ ಯುವತಿ ಹಿಂಬಾಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಚಾಲಕ: ಬಂಧನ

Spread the love ಬೆಂಗಳೂರು: ಆ್ಯಪ್​ನಲ್ಲಿ ಆಟೋ ಬುಕ್ ಮಾಡಿ ಬಳಿಕ ರದ್ದು ಮಾಡಿದ್ದಕ್ಕೆ ಅಸಮಾಧಾನಗೊಂಡು ಯುವತಿಯನ್ನ ಹಿಂಬಾಲಿಸಿ ಅವಾಚ್ಯ ಶಬ್ಧಗಳಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ