Breaking News

ಸ್ಯಾಂಡಲ್​ವುಡ್ ಹಿರಿಯ ನಟ ಮತ್ತು ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲ

Spread the love

ಬೆಂಗಳೂರು: ಸ್ಯಾಂಡಲ್​ವುಡ್ ಹಿರಿಯ ನಟ ಮತ್ತು ನಿರ್ದೇಶಕ ಶಿವರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

‘ಮನೆಯಲ್ಲಿ ಪೂಜೆ ಮಾಡುವ ಸಂದರ್ಭದಲ್ಲಿ ಅವರು ತಲೆ ಸುತ್ತಿ ಬಿದ್ದಿದ್ದು, ತಲೆಗೆ ಗಾಯವಾಗಿದೆ. ಕೂಡಲೇ ವಿದ್ಯಾಪೀಠ ಸರ್ಕಲ್​​ನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೇವೆ. ಸ್ಕ್ಯಾನಿಂಗ್ ರಿಪೋರ್ಟ್​​​ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಗಿದೆ. ವೈದ್ಯರು ಹೇಳುವ ಸರ್ಜರಿ ಮಾಡಬೇಕು. ಆದರೆ ನಮ್ಮ ತಂದೆಗೆ ವಯಸ್ಸಾದ ಹಿನ್ನೆಲೆಯಲ್ಲಿ ಸರ್ಜರಿ ಮಾಡಲು ಆಗಲ್ಲ ಎಂದು ಹೇಳಿದ್ದಾರೆ’ ಎಂದು ಪುತ್ರ ಲಕ್ಷ್ಮೀಶ ಹೇಳಿದರು.

ಸದ್ಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲೇ ಶಿವರಾಮ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಅವರು ಮಾಹಿತಿ ನೀಡಿದರು. ಇನ್ನು ಶಿವರಾಮ್​ ಅವರಿಗೆ 83 ವರ್ಷ ವಯಸ್ಸಾಗಿದ್ದು, ಶುಭಮಂಗಳ, ನಾಗರಹಾವು ಮುಂತಾದ ಚಿತ್ರಗಳ ಮೂಲಕ ಖ್ಯಾತಿ ಗಳಿಸಿದ್ದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ