Breaking News

ಸರ್ಕಾರಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : 10 ಸಾವಿರ ರೂ. ಶುಲ್ಕ ಹೆಚ್ಚಳ

Spread the love

ಬೆಂಗಳೂರು : ಸರ್ಕಾರಿ ಕಾಲೇಜುಗಳಲ್ಲಿ ಇಂಜಿನಿಯರಿಂಗ್ (Engineering) ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ (students) ರಾಜ್ಯ ಸರ್ಕಾರ (State Government) ಬಿಗ್ ಶಾಕ್ ನೀಡಿದ್ದು, ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆವ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕದ ಜೊತೆಗೆ 10 ಸಾವಿರ ರೂ.

ಇತರೆ ಶುಲ್ಕವನ್ನು ಹೆಚ್ಚುವರಿಯಾಗಿ ವಸೂಲಿಗೆ ಅವಕಾಶ ನೀಡಿದೆ.

ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡ ಕೋರ್ಸ್ ಪ್ರವೇಶಕ್ಕೆ ನಿಗದಿಪಡಿಸಿರುವ ಶುಲ್ಕದ ಜೊತೆಗೆ 10 ಸಾವಿರ ರೂ. ಇತರೆ ಶುಲ್ಕವನ್ನು ಪಡೆಯುತ್ತಿದೆ. ಕಳೆದ ವರ್ಷ 23 ಸಾವಿರ ಶುಲ್ಕ ಇತ್ತು. ಈ ವರ್ಷ 10 ಸಾವಿರ ಹೆಚ್ಚುವರಿ ಶುಲ್ಕ ಸೇರಿ 33,810 ರೂ. ಹೆಚ್ಚು ಮಾಡಲಾಗಿದೆ.

 

ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿರುವ ಸರಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗುತ್ತದೆ. ಈ ಹಿಂದೆ ಸರ್ಕಾರಿ ಕಾಲೇಜುಗಳಲ್ಲಿ 23,810 ರೂಪಾಯಿ ಪಾವತಿ ಮಾಡಬೇಕಿತ್ತು. ಈಗ 33,810 ರೂಪಾಯಿ ಶುಲ್ಕ ಪಾವತಿ ಮಾಡಬೇಕಿದೆ.

 

ಇನ್ನು ರಾಜ್ಯದ ಖಾಸಗಿ ವಿವಿಗಳಲ್ಲಿ ಸರ್ಕಾರಿ ಕೋಟಾದ ಎಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ 62 ಸಾವಿರ ರೂ.ಬೋಧನಾ ಶುಲ್ಕದ ಜೊತೆಗೆ 20 ಸಾವಿರ ರೂ. ಇತರೆ ಶುಲ್ಕ ಹಾಗೂ ಸ್ಕಿಲ್ ಲ್ಯಾಬ್ ಸೌಲಭ್ಯಕ್ಕಾಗಿ 10 ರಿಂದ 20 ಸಾವಿರ ರೂ. ವರೆಗೆ ಹೆಚ್ಚುವರಿ ಶುಲ್ಕ ವಸೂಲಿಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ