Breaking News

ತಾಯಿ, ಮಗಳ ಮೇಲೆ ಕಬ್ಬಿಣದ ರಾಡು, ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಸಿಸಿಟಿವಿಯಲ್ಲಿ ಸೆರೆ

Spread the love

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ 38 ವರ್ಷದ ಮಹಿಳೆ ಹಾಗೂ ಆಕೆಯ ಪುತ್ರಿಯ ಮೇಲೆ ಗುಂಪೊಂದು ಕಬ್ಬಿಣದ ರಾಡು ಹಾಗೂ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದೆ. ಸಿಸಿಟಿವಿಯಲ್ಲಿ ಈ ಭಯಾನಕ ಹಲ್ಲೆಯ ದೃಶ್ಯ ಸೆರೆಯಾಗಿದೆ. ಕಾರಿನಿಂದ ಇಳಿದು ಬರುವ ಮಗಳು ಹಾಗೂ ತಾಯಿಯನ್ನು ಅಡ್ಡಗಟ್ಟಿದ್ದ ಗುಂಪೊಂದು ಮಾರಕಾಸ್ತ್ರಗಳಿಂದ ಮನಬಂದಂತೆ ಥಳಿಸುವ ದೃಶ್ಯ ವಿಡಿಯೋದಲ್ಲಿದೆ.

 

ದೆಹಲಿಯ ಶಾಲಿಮರ್ ಬಾಗ್ ರೆಸಿಡೆನ್ಶಿಯಲ್ ಕಾಲೋನಿಯಲ್ಲಿ ಕಳೆದ ತಿಂಗಳು 19 ರಂದು ಈ ಘಟನೆ ನಡೆದಿದ್ದು, ಇದಕ್ಕೆ ಕಾರಣರಾಗಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎಎಪಿ ಶಾಸಕ ಬಂಧನ ಕುಮಾರಿ ಅವರ ಬೆಂಬಲಿಗರಿಂದ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ. ಶಾಸಕಿ ಬಂಧನ ಕುಮಾರಿ ಅವರ ಪತಿ ವಿರುದ್ಧ 2019ರಲ್ಲಿ ಎಫ್ ಐಆರ್ ದಾಖಲಿಸಿದ್ದಕ್ಕಾಗಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹಲ್ಲೆಗೊಳಗಾದ ಮಹಿಳೆ ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಶಾಸಕಿ ಬಂಧನ ಕುಮಾರಿ ಅಲ್ಲಗಳೆದಿದ್ದಾರೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ