Breaking News

ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತ – ಗಾಯಾಳುಗಳು ಆಸ್ಪತ್ರೆಗೆ ದಾಖಲು..!

Spread the love

ಚಿಕ್ಕಮಗಳೂರು : ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯ ನಂತರ ಶಿವಮೊಗ್ಗದತ್ತ ಹೊರಟಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.

ಮಲ್ಲೇನಹಳ್ಳಿ ಹತ್ತಿರ ಈ ಘಟನೆ ನಡೆದಿದೆ. ಕಾರ್ಯಕ್ರಮ ಮುಗಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ್ ಸೇರಿದಂತೆ ಹಲವು ನಾಯಕರು ಶಿವಮೊಗ್ಗದತ್ತ ಪ್ರಚಾರಕ್ಕಾಗಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಬೆಂಗಾವಲು ವಾಹನ ಅಪಘಾತಕ್ಕೆ ಈಡಾಗಿದೆ.

ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಸ್ಥಳದಲ್ಲಿಯೇ ನಿಂತ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ವಾಹನದ ತಾಂತ್ರಿಕ ವೈಫಲ್ಯದಿಂದ ಸ್ಟೀರಿಂಗ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು, ರಸ್ತೆ ಬದಿಯಲ್ಲಿನ ತೋಟಕ್ಕೆ ವಾಹನವನ್ನು ನುಗ್ಗಿಸಿದ್ದ ಎಂದು ಅಲ್ಲಿದ್ದ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ


Spread the love

About Laxminews 24x7

Check Also

ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ 4000 ಜನ ಉಚ್ಚಾರಿಸಿಕೊಂಡರು.

Spread the love ಮಾಜಿ ಸಚಿವ ಶ್ರೀಮಂತ ಪಾಟೀಲ್ ಇವರ ಜನ್ಮದಿನ ನಿಮಿತ್ಯ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ