Breaking News

2023ರ ಫೆಬ್ರವರಿಗೆ ತೆರೆ ಕಾಣಲಿದೆ ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ

Spread the love

ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ಅವರು ಶಬಾನಾ ಅಜ್ಮಿ ಮತ್ತು ಧರ್ಮೇಂದ್ರ ಅವರೊಂದಿಗೆ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದ ಚಿತ್ರೀಕರಣದ ಬ್ಯುಸಿಯಲ್ಲಿದ್ದಾರೆ. ಪ್ರಸ್ತುತ ನವದೆಹಲಿಯಲ್ಲಿ ಚಿತ್ರೀಕರಣ ನಡೆಸುತ್ತಿದ್ದು, ತಾರೆಯರ ಚಿತ್ರೀಕರಣದ ಕೆಲವು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಚಿತ್ರದ ಸಮಗ್ರ ಪಾತ್ರವರ್ಗದಲ್ಲಿ ಜಯಾ ಬಚ್ಚನ್ ಕೂಡ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ, ಕುತುಬ್ ಮಿನಾರ್‌ನಲ್ಲಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರೀಕರಣದಲ್ಲಿ ತಾರೆಯರು ಒಂದು ದಿನ ಕಳೆದಿದ್ದಾರೆ. ತಾರೆಯರ ಚಿತ್ರೀಕರಣದ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಕ್ರೇಜಿ ವೈರಲ್ ಆಗಿವೆ.

ಟ್ರೆಂಡಿಂಗ್ ಫೋಟೋಗಳಲ್ಲಿ, ಆಲಿಯಾ ಭಟ್ ಕೆಂಪು ಮತ್ತು ಬಿಳಿ ಸೀರೆಯಲ್ಲಿ ಕಾಣಿಸಿಕೊಂಡಿದ್ದು, ನೋಡುಗರನ್ನು ಬೆರಗುಗೊಳಿಸಿದ್ದಾರೆ. ನಟ ರಣವೀರ್ ಸಿಂಗ್ ಬಿಳಿ ಶರ್ಟ್ ಮತ್ತು ರಿಪ್ಡ್ ಜೀನ್ಸ್ ಧರಿಸಿದ್ದಾರೆ. ಕೆಲವು ಚಿತ್ರಗಳಲ್ಲಿ, ನಿರ್ದೇಶಕ ಕರಣ್ ಜೋಹರ್ ಅವರು ಆಲಿಯಾ, ರಣವೀರ್ ಮತ್ತು ನೃತ್ಯ ಸಂಯೋಜಕಿ ಫರಾ ಖಾನ್ ಅವರೊಂದಿಗೆ ಸಂಭಾಷಣೆ ನಡೆಸುತ್ತಿರುವುದನ್ನು ಕಾಣಬಹುದು.

ಸೋಮವಾರ, ಕರಣ್ ಜೋಹರ್ ಮತ್ತು ಚಿತ್ರದ ಪ್ರಮುಖ ತಾರೆಯರು ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಬಿಡುಗಡೆ ದಿನಾಂಕವನ್ನು ಘೋಷಿಸಿದರು. ಚಿತ್ರವು ಫೆಬ್ರವರಿ 10, 2023 ರಂದು ಥಿಯೇಟರ್‌ಗಳಲ್ಲಿ ತೆರೆಕಾಣಲಿದೆ. ಸಿನಿಮಾದಲ್ಲಿ ರಣವೀರ್ ಸಿಂಗ್, ಆಲಿಯಾ ಭಟ್, ಧರ್ಮೇಂದ್ರ, ಜಯಾ ಬಚ್ಚನ್ ಮತ್ತು ಶಬಾನಾ ಅಜ್ಮಿ ಮುಂತಾದ ಪ್ರಮುಖ ತಾರಾಬಳಗವನ್ನೊಳಗೊಂಡಿದೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ