ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಇನ್ನು ನಾಳೆ ಬೆಳಗಾವಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿಧಾನ ಪರಿಷತ್ ಚುನಾವಣೆ ನಿಮಿತ್ತ ಬೆಳಗಾವಿಯ ಜಿಲ್ಲೆಯ ರಾಮದುರ್ಗ ಮತ್ತು ಚಿಕ್ಕೋಡಿ ಉಪವಿಭಾಗದ ರಾಯಬಾಗಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಬರುತ್ತಾರೆ. ರಾಮದುರ್ಗದಲ್ಲಿ 11ಕ್ಕೆ, ರಾಯಬಾಗದಲ್ಲಿ 2 ಗಂಟೆಗೆ ನಡೆಯುವ ಬಹಿರಂಗ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗಮಿಸುತ್ತಿದ್ದಾರೆ. ಇಂದು ಕಾಗವಾಡದಲ್ಲಿ ಪ್ರಚಾರ ಮಾಡುತ್ತಿದ್ದೇವೆ.
ಎಲ್ಲ ಕಡೆಯೂ ಗ್ರಾಮ ಪಂಚಾಯಿತಿ ಸದಸ್ಯರು ಬೆಂಬಲಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲ ಮತದಾರರು ಕಾಯುತ್ತಿದ್ದಾರೆ. ಜಿಲ್ಲೆಯಲ್ಲಿ ಪ್ರಬುದ್ಧ ಮತದಾರರು ಇದ್ದಾರೆ. ಒಳ್ಳೆಯ ನಿರ್ಧಾರ ತೆಗದುಕೊಳ್ಳುತ್ತಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಒಟ್ಟಿನಲ್ಲಿ ಕಾಂಗ್ರೆಸ್ ಸೋಲಿಸುವುದೇ ನನ್ನ ಗುರಿ ಎಂದಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿಗೆ ನಿಮ್ಮವರೇ ನಮ್ಮನ್ನು ಬೆಂಬಲಿಸಲಿದ್ದಾರೆ ಎನ್ನುವ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ಕೊಟ್ಟಿದ್ದಾರೆ.