Breaking News

ಚುನಾವಣೆಯಲ್ಲಿ ನಾವು ಕುಸ್ತಿ ಹಿಡಿಯದೇ ಗೆಲ್ಲುತ್ತೇವೆ: ಗೋವಿಂದ್ ಕಾರಜೋಳ

Spread the love

ಬೆಳಗಾವಿ – ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಕುಸ್ತಿ ಹಿಡಿಯದೇ ನಾವು ಗೆಲ್ಲುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ, ರಾಜ್ಯ ಜಲಸಂಪನ್ಮೂಲ ಸಚಿವರೂ ಆಗಿರುವ ಗೋವಿಂದ್ ಕಾರಜೋಳ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿಯ 5150 ಜನ ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ. ಅವರೆಲ್ಲರೂ ನಮ್ಮ ಪೈಲ್ವಾನರೇ. ಅವರ ಮೇಲೆ ನಮಗೆ ವಿಶ್ವಾಸವಿದೆ. ಹಾಗಾಗಿ ನಾವು ಕುಸ್ತಿ ಹಿಡುಯವ ಅಗತ್ಯವೇ ಇಲ್ಲ ಎಂದರು.

ಜಾತಿ ರಾಜಕಾರಣ ಮಾಡುವುದಿಲ್ಲ. ನಾವು ಅಭಿವೃದ್ಧಿ ಆಧಾರದ ಮೇಲೆ ಚುನಾವಣೆ ನಡೆಸುತ್ತೇವೆ. ವಿಧಾನ ಸಭೆ ಚುನಾವಣೆಗೂ ಈ ಚುನಾವಣೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ನಮ್ಮ ಪಕ್ಷದಿಂದ ಒಂದೇ ಅಭ್ಯರ್ಥಿಯನ್ನು ನಿಲ್ಲಿಸಿದ್ದೇವೆ. ಅವರನ್ನು ನಮ್ಮ ಕಾರ್ಯಕರ್ತರೇ ಗೆಲ್ಲಿಸುತ್ತಾರೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಮ್ಮ ಅಭ್ಯರ್ಥಿಗೇ ಮತ ನೀಡುವಂತೆ ಕೇಳುತ್ತೇವೆ ಎಂದರು.

ವಿಧಾನ ಪರಿಷತ್ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮಾತನಾಡಿ, ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನ ತರುವಲ್ಲಿ ಅವರ ಪ್ರತಿನಿಧಿಯಾಗಿ ಕೆಲಸ ಮಾಡಿದ್ದೇನೆ. ಗ್ರಾಮ ಪಂಚಾಯಿತಿ ಅಭ್ಯರ್ಥಿಗಳ ಗೌರವ ಧನ ಹೆಚ್ಚಿಸುವ ಕುರಿತು ನಾವು ಹೋರಾಟ ಮಾಡುತ್ತಿದ್ದು, ಚುನಾವಣೆ ನಂತರವೂ ಹೋರಾಟ ಮಾಡಿ ಗೌರವ ಧನವನ್ನು ಗೌರವಯುತವಾಗಿ ಕೊಡುವಂತೆ ಮಾಡುತ್ತೇವೆ ಎಂದರು.

ಸಂಸದೆ ಮಂಗಲಾ ಅಂಗಡಿ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಶಾಸಕ ಅನಿಲ ಬೆನಕೆ, ವಕ್ತಾರ ಎಂ.ಬಿ.ಜಿರಲಿ, ಸಂಜಯ ಪಾಟೀಲ ಮೊದಲಾದವರಿದ್ದರು.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ