ಮುಂಬೈ: ವಂಚಕ ಸುಕೇಶ್ ಚಂದ್ರಶೇಖರ್ ನಡೆಸಿದ 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ ಎದುರಾಗಿದೆ.
ಜಾರಿ ನಿರ್ದೇಶನಾಲಯ ಲುಕ್ ಔಟ್ ನೋಟಿಸ್ ಹೊರಡಿಸಿದ್ದು ವಲಸೆ ವಿಭಾಗದ ಅಧಿಕಾರಿಗಳು ನಟಿಯನ್ನು ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನದಿಂದ ಕೆಳಗಿಳಿಸಿದರು.
ಮೂಲಗಳ ಪ್ರಕಾರ, ನಟಿ ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ನಿರ್ಗಮನ ಗೇಟ್ ಸಂಖ್ಯೆ 3ರ ಮೂಲಕ ಸಂಜೆ 5:30ಕ್ಕೆ ಮಸ್ಕತ್ಗೆ ತೆರಳುತ್ತಿದ್ದರು. ಆದ್ರೆ ವಂಚನೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಭಾರತ ಬಿಟ್ಟು ತೊರೆಯಲು ಅನುಮತಿ ನೀಡಬಾರದು ಎಂಬ ನಿರ್ದೇಶನದೊಂದಿಗೆ ಲುಕ್‌ಔಟ್ ನೋಟಿಸ್ ನೀಡಲಾಗಿತ್ತು.