Breaking News

ರಾಜ್ಯದಲ್ಲಿ ಕೊರೋನಾ ಹೆಚ್ಚಾದರೆ ಶಾಲೆ ಬಂದ್ – ಸಚಿವ ಬಿ.ಸಿ.ನಾಗೇಶ್

Spread the love

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಕಾಲಿಟ್ಟ ನಂತರ, ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸೋದಕ್ಕೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಕೋವಿಡ್ ತೀವ್ರತೆಯನ್ನು ಆಧರಿಸಿ, ಶಾಲಾ-ಕಾಲೇಜು ಮುಚ್ಚೋ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಕೊರೋನಾ ಸೋಂಕಿನ ತೀವ್ರತೆ ಬಗ್ಗೆ ತಜ್ಞರಿಂದ ಪ್ರತಿ ದಿನ ವರದಿಯನ್ನು ಪಡೆಯುತ್ತಿದ್ದೇವೆ.

ಸದ್ಯಕ್ಕೆ ತಜ್ಞರು ನೀಡುತ್ತಿರುವಂತ ವರದಿಯ ಪ್ರಕಾರ ಯಾರೂ ಆತಂಕ ಪಡುವಂತೆ ಕೊರೋನಾ ತೀವ್ರತೆ ಇಲ್ಲ. ಕೊರೋನಾ ತೀವ್ರತೆ ಆಧರಿಸಿ, ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ವಸತಿ ಶಾಲೆಗಳಲ್ಲಿ ಕೊರೋನಾ ಹೆಚ್ಚಾದ ಬಗ್ಗೆ ಗಮನಕ್ಕೆ ಬಂದಿದೆ. ಆ ಬಗ್ಗೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಕೊರೋನಾ ತೀವ್ರತೆ ಇಲ್ಲ. ಪೋಷಕರು ಆತಂಕ ಪಡಬಾರದು ಎಂದರು


Spread the love

About Laxminews 24x7

Check Also

ಕಲಾ ಪ್ರತಿಭೋತ್ಸವಕ್ಕೆ ಚಾಲನೆ

Spread the love ಕಲಾ ಪ್ರತಿಭೋತ್ಸವಕ್ಕೆ ಚಾಲನೆ ಬೆಳಗಾವಿ. ಜಿಲ್ಲೆಯ ಬಾಲ ಪ್ರತಿಭೆ ಹಾಗೂ ಯುವ ಪ್ರತಿಭೆಗಳಿಗೆ ಜಾನಪದ ಗೀತೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ