Breaking News

ಮಾಜಿ ಸಿ. ಎಂ ಸಿದ್ದರಾಮಯ್ಯ ಇವತ್ತು ನಾಯಕ ಆದರೆ ಇತ್ತೀಚಿಗೆ ಅವರು ಬಹಳಷ್ಟು ಸುಳ್ಳು ಹೇಳುವುದನ್ನು ಕಲಿಯುತ್ತಿದ್ದಾರೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ

Spread the love

ಮಾಜಿ ಸಿ. ಎಂ ಸಿದ್ದರಾಮಯ್ಯ ಇವತ್ತು ನಾಯಕ ಆದರೆ ಇತ್ತೀಚಿಗೆ ಅವರು ಬಹಳಷ್ಟು ಸುಳ್ಳು ಹೇಳುವುದನ್ನು ಕಲಿಯುತ್ತಿದ್ದಾರೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು..

ಅವರು ರಾಯಬಾಗ ಪಟ್ಟಣದ ಮಹಾವೀರ ಭವನದಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿಯವರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಇವತ್ತು ಸಿದ್ದರಾಮಯ್ಯ ಇವತ್ತು ನಮ್ಮ ನಾಯಕ,ಗುರು ಆದರೆ ಇತ್ತೀಚಿಗೆ ಅವರು ಬಹಳಷ್ಟು ಸುಳ್ಳು ಹೇಳುವುದನ್ನು ಕಲಿತ್ತಿದ್ದಾರೆ.ನಿನ್ನೆ ರಾಯಬಾಗದಲ್ಲಿ ಸಿದ್ದರಾಮಯ್ಯ ನವರು ವಿವೇಕರಾವ ಪಾಟೀಲಗೂ ಕಾಂಗ್ರೆಸ್ ಪಕ್ಷಕೂ ಸಂಬಂದವಿಲ್ಲ ಎಂದರು..ಆದರೆ ನಾನು ಕೋಲ್ಹಾಪೂರ ಮಹಾಲಕ್ಷ್ಮಿ ದೇವಿಯ ಮೇಲೆ ಆಣೆ ಮಾಡಿ ಹೇಳತ್ತಿನಿ ವಿವೇಕರಾವ ಪಾಟೀಲ ಕಾಂಗ್ರೆಸ್ ಪಕ್ಷದ ಸದಸ್ಯರು..ಕಳೆದ ವಿಧಾನಪರಿಷತ್ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ವಿವೇಕರಾವ ಪಾಟೀಲ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಕೂಡುವಂತೆ ಕೇಳಿಕೊಂಡಿದೆ.ಆದರೆ ವೀರಕುಮಾರ ಪಾಟೀಲ ಅವರಿಗೆ ಟಿಕೆಟ್ ನೀಡಿದರು.

ಆದರೆ ವಿವೇಕರಾವ ಪಾಟೀಲ ಅವರು ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಬಂದರು.ನಂತರ ಸಿದ್ದರಾಮಯ್ಯನವರು ವಿವೇಕರಾವ ಪಾಟೀಲಗೆ ನಮ್ಮ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುವಂತೆ ನನ್ನ ಬಳಿ ಹೇಳಿದ್ದರು.ಆದರೆ ವಿವೇಕರಾವ ಪಾಟೀಲಗೂ ಕಾಂಗ್ರೆಸ್ ಗೂ ಸಂಬಂದವಿಲ್ಲ ಅಂತಾ ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಸಿ ಎಂ ಸಿದ್ದರಾಮಯ್ಯ ವಿರುದ್ಧ ರಮೇಶ ಜಾರಕಿಹೊಳಿ ಅಸಮಾಧನ ವ್ಯಕ್ತಪಡಿಸಿದರು..


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ