ಬಾದಾಮಿ: ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯ ವೇದಿಕೆಯಲ್ಲಿಯೇ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ಚಿಮ್ಮನಕಟ್ಟಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಬಾದಾಮಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಬಿ.ಬಿ.
ಚಿಮ್ಮನಕಟ್ಟಿ, ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಪರ್ಧಿಸುವುದು ಬೇಡ. ಅವರು ವರುಣಾದಿಂದಲೇ ಸ್ಪರ್ಧೆ ಮಾಡಲಿ. ಬಾದಾಮಿ ನನ್ನ ಕ್ಷೇತ್ರ. ನನ್ನ ಕ್ಷೇತ್ರವನ್ನು ನನ್ನಿಂದ ಕಿತ್ತುಕೊಂಡು ಸ್ಪರ್ಧಿಸಿ ಗೆದ್ದಿದ್ದಾರೆ. ನನ್ನ ಎಂ ಎಲ್ ಸಿ ಮಾಡ್ತೀನಿ ಎಂದು ಸುಳ್ಳು ಹೇಳಿ ಮೋಸ ಮಾಡಿದ್ದಾರೆ. ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ. ಇದರಿಂದ ನನಗೆ ತುಂಬಾ ನೋವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹುಲಿಯಂತಿದ್ದ ನಾನು ಇಲಿಯಂತಾಗಿದ್ದೀನಿ. ನನ್ನ ಕ್ಷೇತ್ರಕ್ಕೆ ಬಂದು ನನಗೇ ನೋವುಂಟು ಮಾಡಿದ್ದಾರೆ. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸುವುದು ಬೇಡ. ಮುಂದಿನ ಬಾರಿ ನಾನು ಬಾದಾಮಿಯಿಂದ ಸ್ಪರ್ಧಿಸಿ ಗೆದ್ದು ಎಂ ಎಲ್ ಎ ನೂ ಆಗ್ತೀನಿ. ಸಿಎಂ ಕೂಡ ಆಗ್ತೀನಿ ಎಂದು ಬಹಿರಂಗವಾಗಿ ಗುಡುಗಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯಗೆ ಇದರಿಂದ ತೀವ್ರ ಮುಜುಗರವಾಗಿದ್ದು, ವೇದಿಕೆಯಲ್ಲಿಯೇ ಚಿಮ್ಮನಕಟ್ಟಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಂತೆ ಕಾಂಗ್ರೆಸ್ ನ ಹಲವು ನಾಯಕರು ಚಿಮ್ಮನಕಟ್ಟಿಯನ್ನು ಸಮಾಧಾನಪಡಿಸಿ ವೇದಿಕೆಯಿಂದ ಕರೆದೊಯ್ದ ಘಟನೆ ನಡೆದಿದೆ.
Laxmi News 24×7