ತುಮಕೂರು: ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.
ಮೂರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಲಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ. ಅರುಣ ನರ್ಸಿಂಗ್ ಕಾಲೇಜಿನ 3, ಸಿದ್ಧಂಗಂಗಾ ನರ್ಸಿಂಗ್ ಕಾಲೇಜಿನ 8 ಹಾಗೂ ವರದರಾಜ ಕಾಲೇಜಿನ 12 ವಿದ್ಯಾರ್ಹಿಗಳು ಸೇರಿದಂತೆ ಒಟ್ಟು 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ 109 ಜನರಿಗೆ ಕೋವಿಡ್ ಪಾಸಿಟಿವ್
Laxmi News 24×7