ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಇಂದು ಬೆಳಗ್ಗೆ ನಿಧನರಾದರು.
ಆನಂದ್ ಸಿಂಗ್ ಬಿಶ್ತ್ (89) ಅವರು ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 10.44ಕ್ಕೆ ನಿಧನರಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯುಪಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, “ಸಿಎಂ ಯೋಗಿ ಆದಿತ್ಯನಾಥ್ ಅವರ ತಂದೆ ಬೆಳಗ್ಗೆ ನಿಧನರಾಗಿದ್ದಾರೆ” ಎಂದು ಸಂತಾಪ ಸೂಚಿಸಿದ್ದಾರೆ.

ಯೋಗಿ ಆದಿತ್ಯನಾಥ್ ಅವರ ತಂದೆ ಆನಂದ್ ಸಿಂಗ್ ಬಿಶ್ತ್ ಕಿಡ್ನಿ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಮಾರ್ಚ್ 15 ರಂದು ಅವರನ್ನು ಏಮ್ಸ್ ಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು.
ಭಾನುವಾರ ಆದಿತ್ಯನಾಥ್ ಅವರ ತಂದೆಯವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದು, ತಕ್ಷಣ ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯು ವಾರ್ಡಿಗೆ ಸ್ಥಳಾಂತರಿಸುವ ಮೊದಲು ಅವರು ಭಾನುವಾರ ಡಯಾಲಿಸಿಸ್‍ಗೆ ಒಳಗಾಗಿದ್ದರು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
 Laxmi News 24×7
Laxmi News 24×7
				 
		 
						
					 
						
					 
						
					