Breaking News

ಲಖನ್ ಜಾರಕಿಹೊಳಿ ನಮ್ಮ ಪಕ್ಷದ ಬಂಡಾಯ ಅಭ್ಯರ್ಥಿ ಅಲ್ಲ,: ಲಕ್ಷ್ಮಣ ಸವದಿ

Spread the love

ಲಖನ್ ಜಾರಕಿಹೊಳಿ ನಮ್ಮ ಪಕ್ಷದ ಬಂಡಾಯ ಅಭ್ಯರ್ಥಿ ಅಲ್ಲ, ಅವರು ಪಕ್ಷೇತರ ಅಭ್ಯರ್ಥಿ. ನಮ್ಮ ಗುರಿ ಪ್ರಥಮ ಪ್ರಾಶಸ್ತ್ಯದ ಮತಗಳೊಂದಿಗೆ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಗೆಲ್ಲಿಸುವುದು ಒಂದೇ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಲಕ್ಷ್ಮಣ ಸವದಿ ಅವರು ಲಖನ್ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿ, ನಮ್ಮಲ್ಲಿ ಸದಸ್ಯತ್ವ ಪಡೆದುಕೊಂಡು ಚುನಾವಣೆಗೆ ನಿಂತಿದ್ದರೆ ಆಗ ಅವರು ಬಂಡಾಯ ಅಭ್ಯರ್ಥಿ ಆಗಿರುತ್ತಿದ್ದರು. ಹೀಗಾಗಿ ಬಂಡಾಯ ಅಭ್ಯರ್ಥಿ ಅಲ್ಲ, ಸ್ವತಂತ್ರ ಅಭ್ಯರ್ಥಿ ಎಂದರು.

ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಮಹಾಂತೇಶ ಕವಟಗಿಮಠ ಅವರನ್ನು ಬಹಳ ದೊಡ್ಡ ಅಂತರದಲ್ಲಿ ಗೆಲ್ಲಿಸಬೇಕು ಎಂದು ನಮಗೆಲ್ಲರಿಗೂ ಪಕ್ಷದ ವತಿಯಿಂದ ಸಿಎಂ ಬೊಮ್ಮಾಯಿ ಅವರು ಸೂಚನೆ ಕೊಟ್ಟಿದ್ದಾರೆ ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ