ಚೆನ್ನೈ : ತಮಿಳುನಾಡಿನ (Tamil Nadu) ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಪತನವಾಗಿದ್ದು, ಘಟನಾ ಸ್ಥಳದಲ್ಲಿ ಏಳು ಮೃತ ದೇಹಗಳು ಪತ್ತೆಯಾಗಿದ್ದು, ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವ್ರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ (Coonoor, Tamil Nadu) ಸೇನಾ ಹೆಲಿಕಾಪ್ಟರ್ (Army helicopter) ಪತನಗೊಂಡಿದೆ. ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ರು ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನಿವ್ರು ಸೇನಾ ಕಾಲೇಜಿನಲ್ಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ.
ಸಧ್ಯ ಬಿಪಿನ್ ರಾವತ್ ಅವ್ರು ಗಂಭೀರವಾಗಿ ಗಾಯಗೊಂಡಿದ್ದು, ದೇಹದಲ್ಲಿ ಆನೇಕ ಸುಟ್ಟ ಗಾಯಗಳಾಗಿವೆ. ಇನ್ನವ್ರ ಸ್ಥಿತಿ ಗಂಭೀರವಾಗಿ ಎನ್ನಲಾಗ್ತಿದೆ. ಹೆಲಿಕಾಪ್ಟರ್ʼನಲ್ಲಿದ್ದ ಸೇನಾ ಅಧಿಕಾರಿಗಳ ಹೆಸರನ್ನು ಇನ್ನು ಬಹಿರಂಗಪಡಿಸಿಲ್ಲ.