Breaking News

ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ :

Spread the love

ಬೆಂಗಳೂರು : ರಾಜ್ಯ ಸರ್ಕಾರವು (State Government) ಪಡಿತರ ಚೀಟಿದಾರರಿಗೆ (Ration card holders) ಸಿಹಿಸುದ್ದಿ ನೀಡಿದ್ದು, ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು (Garib Kalyan Yojana) ಕೇಂದ್ರ ಸರ್ಕಾರ ಮತ್ತೆ 4 ತಿಂಗಳು ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೀಡುತ್ತಿರುವ ಆಹಾರ ಧಾನ್ಯದಲ್ಲಿ ಯಾವುದೇ ಕಡಿತ ಇಲ್ಲ ಎಂದು ಆಹಾರ ಸಚಿವ ಉಮೇಶ್ ಕತ್ತಿ (Minister Umesh Kaththi) ಹೇಳಿದ್ದಾರೆ.

ಕೇಂದ್ರ ಸರ್ಕಾರವು ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ನಾಲ್ಕು ತಿಂಗಳು ವಿಸ್ತರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 4.28 ಕೋಟಿ ಜನರಿಗೆ ಅನುಕೂಲವಾಗಲಿದೆ. ಕೇಂದ್ರದ ಜೊತೆಗೆ ರಾಜ್ಯ ಸರ್ಕಾರವೂ ಕೈ ಜೋಡಿಸಿದ್ದು, ರಾಜ್ಯದ ಪ್ರತಿ ಫಲಾನುಭವಿಗೂ 10 ಕೆಜಿ ಅಕ್ಕಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ ಉಚಿತ ಆಹಾರ ಧಾನ್ಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 2020 ರ ಮಾರ್ಚ್ ನಲ್ಲಿ ಈ ಯೋಜನೆ ಜಾರಿಗೆ ತಂದಿತ್ತು


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ