ಕಾರವಾರ: ಡಿಆರ್ ಕಚೇರಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್. ಕಾರವಾರದ ಡಿಆರ್ ಕಚೇರಿಯಲ್ಲಿಯೇ ಗುರುಪ್ರಸಾದ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ನಿಖರ ಕಾಣರ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.