ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಭಾರತೀಯ ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ಬೆಳಗಾವಿಯಲ್ಲಿ ಎಬಿವಿಪಿ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ತಮಿಳುನಾಡಿನ ಕುನೂರ್ ಅರಣ್ಯಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಜನರು ನಿಧನ ಹೊಂದಿದ್ದಾರೆ. ಹೀಗಾಗಿ ಇಡೀ ದೇಶಾಧ್ಯಂತ ಶೋಕದ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‍ನ ಬೆಳಗಾವಿ ಮಹಾನಗರ ಘಟಕದ ವತಿಯಿಂದ ನಗರದ ರಾಜ್ ಲಖಮಗೌಡ ಕಾಲೇಜು ಎದುರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಿಪಿನ್ ರಾವತ್ ಅವರ ಭಾವಚಿತ್ರದ ಮುಂದೆ ಮೇಣದ ಬತ್ತಿ ಬೆಳಗಿ ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.