Breaking News

ಲಸಿಕೆ ಪಡೆದುಕೊಳ್ಳದಿದ್ದರೂ ಸುಳ್ಳು ಸರ್ಟಿಫಿಕೇಟ್ ಕೊಡುತ್ತಿರುವ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿಗಳು:

Spread the love

ದೇಶದ ಜನರ ಸುರಕ್ಷೆ, ಕೋವಿಡ್ ತಡೆಯ ದೃಷ್ಟಿಯಿಂದ ಕೇಂದ್ರ ಸರ್ಕಾರ ದೇಶದ ಜನರಿಗೆ ಉಚಿತವಾಗಿ ಕೈಬಿಟ್ಟು ಲಸಿಕೆಯನ್ನು ಕೊಡುತ್ತಿದೆ.ಆದ್ರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಕೊರೊನಾ ಲಸಿಕೆಗಳನ್ನು ಕೊಡದೇ ಇದ್ದರೂ ಕೋವಿಡ್ ಪ್ರಮಾಣ ಪತ್ರಗಳನ್ನು ಕೊಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ.

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಕಳೆದ ಎರಡು ತಿಂಗಳಿನಿಂದ ಸಾರ್ವಜನಿಕರಿಗೆ ಕೋವಿಡ್ ಲಸಿಕೆ ನೀಡದ್ದಿದ್ದರೂ‌‌ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಚೆನ್ನಮ್ಮ ಕೊಳಚಿ ಎಂಬುವವರು ಮೊದಲ ಮತ್ತು ಎರಡನೇ ಡೋಸ್ ಲಸಿಕೆ ತೆಗೆದುಕೊಳ್ಳಲಾಗಿದೆ ಎಂದು ಜನರಿಗೆ ಕೇಂದ್ರ ಸರ್ಕಾರದಿಂದ ಪ್ರಮಾಣೀಕೃತ ಸರ್ಟಿಫಿಕೇಟ್ ಗಳನ್ನು ನೀಡುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ದೇಶದಲ್ಲಿ ಸದ್ಯ ಕೊರೊನಾ ಸೋಂಕಿತ ಪ್ರಕರಣಗಳು ಸಂಖ್ಯೆ ಕಡಿಮೆ ಇದ್ದರೂ ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ಗಡಿಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.ಇತ್ತ ಕೊರೊನಾ ಸೋಂಕಿತ ಪ್ರಕರಣಗಳು ತಡೆಗೆ ಹಾಗೂ ಜನರ ಆರೋಗ್ಯ ಸುರಕ್ಷಾ ದೃಷ್ಟಿಯಿಂದ ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಕೊಳ್ಳಬೇಕೆಂಬ ಆದೇಶವನ್ನು ಕೊಟ್ಟಿದ್ದಲ್ಲದೇ ಜಿಲ್ಲಾಸ್ಪತ್ರೆಗಳಿಗೆ ದಿನವೊಂದಕ್ಕೆ ಇಂತಿಷ್ಟು ಟಾರ್ಗೆಟ್ ಕೊಡುತ್ತಿದೆ. ಆದ್ರೆ, ಸಿಬ್ಬಂದಿಗಳು ಟಾರ್ಗೆಟ್ ರೀಚ್ ಮಾಡಲು ಅನ್ಯ ಮಾರ್ಗವನ್ನು ಹಿಡಿದಿದ್ದಾರೆ.ಅದಕ್ಕಾಗಿ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ಕುಮ್ಮಕ್ಕಿನಿಂದಾಗಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಸಿಕೆ ತೆಗೆದುಕೊಳ್ಳುವವರ ಆಧಾರ ಕಾರ್ಡಗಳನ್ನು ಹಾಗೂ ಅವರ ಮೊಬೈಲ್‌ ನಂಬರ್ ಗಳನ್ನು ಕಲೆಕ್ಟ ಮಾಡಿಕೊಂಡು ಬರ್ತಿದ್ದಾರೆ. ಇದಾದ್ಮೇಲೆ ಜಿಲ್ಲಾಸ್ಪತ್ರೆ ಸಿಬ್ಬಂದಿಗಳು ಕೆಲವರಿಗೆ ಲಸಿಕೆ ಹಾಕಿಸಿಕೊಂಡು ಹೋಗಲು ಬನ್ನಿ ಎಂದು ಪೋನ್ ಕರೆ ಮಾಡಿ ತಿಳಿಸ್ತಾರೆ.ಈ ವೇಳೆ ಬಂದ ಕೆಲವರಿಗೆ ಮಾತ್ರ ಲಸಿಕೆ ಹಾಕ್ತಿದ್ದಾರೆ..ಅರ್ಜಂಟ್ ಅನ್ನೋವವರಿಗೆ ಎರಡನೇ ಡೋಸ್ ಲಸಿಕೆ ಪ್ರಮಾಣ ಪತ್ರವನ್ನು ಕೊಡ್ತಿದ್ದಾರೆ.‌ಈ ಬಗ್ಗೆ ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳ ಗಮಕ್ಕೆ ತಂದರೂ ಯಾವುದೇ ‌ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ.

ಲಸಿಕೆ ಪಡೆದುಕೊಂಡಿರುವ ಸುಳ್ಳು ಸರ್ಟಿಫಿಕೇಟ್ ಕೊಡುತ್ತಿರುವ ಆಸ್ಪತ್ರೆ ಸಿಬ್ಬಂದಿಗಳು:

ಚಿಕ್ಕೋಡಿ ತಾಲೂಕಿನ ಹಿರೇಕೊಡಿ ಗ್ರಾಮದ ಸುರೇಶ ಗುಡಿಮನಿ ಎಂಬುವವರು ಲಸಿಕೆ ಹಾಕಿಸಿಕೊಳ್ಳಲು ಜಿಲ್ಲಾಸ್ಪತ್ರೆ ತೆರಳಿದ್ದಾರೆ.ಆದ್ರೆ,ಆಸ್ಪತ್ರೆಯ ವೈದ್ಯಾಧಿಕಾರಿ ಚೆನ್ನಮ್ಮ ಕೊಳೆಚೆ ಮತ್ತು ಅವರ ಸಿಬ್ಬಂದಿಗಳು ನೀವು ಲಸಿಕೆ ತೆಗೆದುಕೊಂಡಿದ್ದೀರಿ ಎಂಬ ಹೇಳಿಕೆ ಕೇಳಿ ದಂಗಾಗಿದ್ದಾರೆ. ಕಳೆದ ನವೆಂಬರ್‌ 09ರಂದು ಮೊದಲ ಡೋಸ್ ಪಡೆದಿರುವುದಾಗಿದೆ ಹೇಳಿದ್ದಾರೆ. ನಾನು ವ್ಯಾಕ್ಸಿನೇಷನ್‌ ಮಾಡಿಸಿಕೊಂಡಿಲ್ಲದಿದ್ದರೂ ಅದ್ಹೇಗೆ ಲಸಿಕೆ ಪ್ರಮಾಣ ಪತ್ರವನ್ನ ಕೊಡ್ತೇರಿ ಎಂಬ ಪ್ರಶ್ನೆಗೆ ಈಗ ಮತ್ತೆ ಲಸಿಕೆ ಮಾಡಿಸಿಕೋ ಬಾ ಎಂದು ಉಡಾಪೆ ಉತ್ತರ ಕೊಡ್ತಿದ್ದಾರಂತೆ. ಈ ಬಗ್ಗೆ ಪ್ರಶ್ನಿಸಲು ಆಸ್ಪತ್ರೆಗೆ ತೆರಳಿದ್ರೆ ಸುರೇಶನಿಗೆ ಆಸ್ಪತ್ರೆ ಸಿಬ್ಬಂದಿ ಕಡೆಯ ಗೊಂಡಾಗಳು ಕೊಲೆ ಬೆದರಿಕೆ ಹಾಕುತ್ತಿದ್ದಲ್ಲದೇ ಪೋನ್ ಕರೆ ಮಾಡಿ ಅವಾಚ್ಚ ಶಬ್ದಗಳಿಂದ ನಿಂಧಿಸುತ್ತಿದ್ದಾರೆ. ಆದ್ರೆ, ಕೊರೊನಾ ವೈರಸ್ ಬಂದ್ಮೇಲೆ ಜಗತ್ತೇ ಅಲ್ಲೋಲ ಕಲ್ಲೋಲ ಆಗಿದೆ. ಇದೀಗ ಒಮಿಕ್ರಾನ್ ಸೋಂಕಿತ ಪ್ರಕರಣಗಳು ರಾಜ್ಯದಲ್ಲಿ ಕಾಣಿಸಿಕಳ್ಳುತ್ತಿವೆ.ಹೀಗಾಗಿ ಬಡವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಭಾರತ ಸರ್ಕಾರ ದೇಶದ ಎಲ್ಲ ನಾಗರಿಕರಿಗೆ ಉಚಿತವಾಗಿ ವ್ಯಾಕ್ಸಿನೇಷನ್‌ ಮಾಡುತ್ತಿದೆ.ಆದ್ರೆ, ಲಸಿಕೆ‌ ಕೊಡದಿದ್ದರೂ ಅವರ ಆಧಾರ ಕಾರ್ಡ್‌ಗಳನ್ನು ಪಡೆದುಕೊಂಡು ಯಾರದೋ ಮೊಬೈಲ್ ಸಂಖ್ಯೆ ನಮೂದಿಸಿ ಫಸ್ಟ್‌ ಡೋಸ್ ಲಸಿಕೆ ಪಡೆದಿದ್ದಾರೆ ಎಂದು ಸರ್ಕಾರದ ಕಣ್ಣಿಗೆ ಮಣ್ಣು ಎರಚುವ ಕೆಲಸ ಮಾಡುತ್ತಿರವವರ ಮೇಲೆ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಮುಂದೆ ಈರೀತಿಯ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು.‌ ಬೋಗಸ್ ಲಸಿಕೆ ಪ್ರಮಾಣ ಪತ್ರ ನೀಡುವ ಜಾಲ ಕಳೆದ ಎರಡು ತಿಂಗಳಿನಿಂದ ಅಕ್ರಮದಲ್ಲಿ ಪಾಲ್ಗೊಂಡಿರುವ ಬಗ್ಗೆ ಮಾಹಿತಿ ಇದೆ.ಹೀಗಾಗಿ ಆರೋಗ್ಯ ಇಲಾಖೆ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯ ‌ಮಾಡಿದ್ದಾರೆ.

 


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ