ಬೆಂಗಳೂರು, ಡಿಸೆಂಬರ್ 10; ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯಹವಾಮಾನಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಜೊತೆಗೆ ಉಷ್ಣಾಂಶ ಸಹ ಕುಸಿತವಾಗಲಿದೆ ಎಂದು ಇಲಾಖೆ ಹೇಳಿದೆ.
ಈ ಬಾರಿ ನೈಋತ್ಯ ಮುಂಗಾರು ಅವಧಿಯಿಂದಲೂ ದೇಶದ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಲೇ ಇದೆ. ಅಕ್ಟೋಬರ್, ನವೆಂಬರ್ ತಿಂಗಳಿನಲ್ಲಿಯೂ ಅಕಾಲಿಕ ಮಳೆಯಾಗಿದೆ. ‘ಜವಾದ್’ ಚಂಡಮಾರುತದ ಪ್ರಭಾವ ದೇಶದಲ್ಲಿ ಕಡಿಮೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ ಆಂಧ್ರ ಪ್ರದೇಶ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆಯಲ್ಲಿ ಮುಂದಿನ ದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಟ್ಟಿದೆ.