ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳಿಗಿಂದ ಅಧಿಕ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ವಿಜಯ ಸಾಧಿಸುತ್ತಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮತ ಚಲಾಯಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ಪರಿಷತ್ ಮತದಾನದ ಹಿನ್ನೆಲೆಯಲ್ಲಿ ನಾನು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಕಾಂಗ್ರೆಸ್ ನಗರಸೇವಕರೊಂದಿಗೆ ಸೇರಿ ಮತದಾನ ಮಾಡಿದ್ದೇನೆ. ಈಗಾಗಲೇ ನಾವು ಪದೇ ಪದೇ ಹೇಳುವಂತೆ ನಮ್ಮ ಗೆಲುವು ನಿಶ್ಚಿತ. ಇನ್ನು ಈ ಚುನಾವಣೆಯಲ್ಲಿ ಕಾಂಗ್ರೆಸ್ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಇನ್ನು ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳಿಗಿಂತ ನಾವು ಹೆಚ್ಚು ಮತಗಳನ್ನು ಪಡೆದು ಪ್ರಥಮ ಪ್ರಾಶಸ್ಥ್ಯದ ಮತಗಳನ್ನು ಪಡೆದು ನಮ್ಮ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಆಯ್ಕೆಯಾಗಲಿದ್ದಾರೆ ಎಂದರು.