ಬೆಳಗಾವಿ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯ ಸಾಧಿಸುತ್ತಾರೆ. ಹಾನಗಲ್ ಉಪ ಚುನಾವಣೆಯ ಫಲಿತಾಂಶದಂತೆ ಈ ಫಲಿತಾಂಶವೂ ಬರಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು.
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತ ಚಲಾಯಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರ ಒಗ್ಗಟ್ಟನ್ನು ನೀವೇ ನೋಡುತ್ತಿದ್ದೀರಿ. ಜಿಲ್ಲೆಯ 14 ತಾಲೂಕುಗಳಲ್ಲಿ ನಮ್ಮ ಕಾಂಗ್ರೆಸ್ ಮತದಾರರಿದ್ದಾರೆ. ನಮ್ಮ ಬೆಂಬಲಿಗರ ಸಾಕಷ್ಟು ಒಳ್ಳೆಯ ಸಹಕಾರವಿದೆ. ಹಾಗಾಗಿ ಮೊದಲ ಸುತ್ತಿನಲ್ಲಿಯೇ ಗೆಲ್ಲುವ ನಿರೀಕ್ಷೆ ಇದೆ ಎಂದರು.