ಬೆಂಗಳೂರು: ಒಮಿಕ್ರಾನ್ ಆತಂಕ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷ ಮತ್ತು ಕ್ರಿಸ್ಮಸ್ಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ನಿರ್ಧಾರ ಆಗಲಿದೆ. ಈ ಬಾರಿಯೂ ಅದ್ದೂರಿಯಾಗಿ ಆಚರಿಸಲು ಅವಕಾಶ ಇಲ್ಲ ಎಂದು ಪಾಲಿಕೆ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ರೂಪಾಂತರಿ ತಳಿಯ ಆತಂಕವಿದೆ. ಇದುವರೆಗೂ ಬಿಬಿಎಂಪಿಗೆ ಆಚರಣೆಗೆ ಅನುಮತಿ ಕೋರಿ ಯಾವುದೇ ಮನವಿಗಳು ಬಂದಿಲ್ಲ ಎಂದಿದ್ದಾರೆ. ಕೊರೊನಾದ ಈ ಪರಿಸ್ಥಿತಿಯಲ್ಲಿ ಆಚರಣೆಗೆ ಅವಕಾಶ ಕೊಡುವುದು ಬೇಡವೋ ಎಂಬುದು ಸರ್ಕಾರದ ಮಟ್ಟದಲ್ಲಿ ನಿರ್ಧಾರ ಆಗಲಿದೆ ಎಂದು ತಿಳಿಸಿದ್ದಾರೆ.