Breaking News

ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಇಂದು, ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ, – ಫ್ಲೈ ಓವರ್ – ಸಿಸಿ ರಸ್ತೆ ಅಭಿವೃದ್ಧಿ – ಸ್ಮಾರ್ಟ್ ಸಿಟಿ ಚರ್ಚಿಸಿ ಸಭೆ

Spread the love

ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ಇಂದು, ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ,
– ಫ್ಲೈ ಓವರ್
– ಸಿಸಿ ರಸ್ತೆ ಅಭಿವೃದ್ಧಿ
– ಸ್ಮಾರ್ಟ್ ಸಿಟಿ
– ಹುಬ್ಬಳ್ಳಿ ಧಾರವಾಡ ಬೈ ಪಾಸ್ ರಸ್ತೆ – – ರೈತರಿಗೆ ಬೆಳೆ ಪರಿಹಾರ
– ಕೋವಿಡ್ ಪರಿಹಾರ
ಹಾಗು ಇನ್ನಿತರ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿ ಸಭೆ ನಡೆಸಲಾಯಿತು.

ಫ್ಲೈ ಓವರ್ ಕಾಮಗಾರಿ –
ರಾಷ್ಟ್ರೀಯ ಹೆದ್ದಾರಿ ಇಲಾಖಾ ಅಧಿಕಾರಿಗಳಿಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಫ್ಲೈ ಓವರ್ ಕಾಮಗಾರಿಯ ವೇಗ ಹೆಚ್ಚಿಸುವಂತೆ ಸೂಚಿಸಲಾಯಿತು. ಕಾಮಗಾರಿ ಈಗಾಗಲೇ ಪ್ರಾರಂಭಗೊಂಡಿದ್ದು, ಪ್ರಾಥಮಿಕ ಹಂತವಾಗಿ ಪಿಲ್ಲರ್ ಗಳನ್ನು ಅಳವಡಿಸುವ ಕಾಮಗಾರಿಯಿಂದ ಟ್ರಾಫಿಕ್ ಸಮಸ್ಯೆಯಿಂದ ವಾಹನ ಸವಾರರು ಹೈರಾಣಾಗಿದ್ದು, ಫ್ಲೈ ಓವರ್ ಕಮಿಟಿ ನೀಡಿರುವ ಮಾರ್ಗಸೂಚಿಯಂತೆ ಪರ್ಯಾಯ ಮಾರ್ಗಗಳನ್ನು ವ್ಯವಸ್ಥೆ ಮಾಡುವಂತೆ ಸೂಚಿಸಲಾಯಿತು. ವಾಹನ ದಟ್ಟಣೆ ಕಡಿಮೆ ಮಾಡಲು ಫ್ಲೈ ಓವರ್ ನಿಮಾಣ ಯೋಜನೆಗೆ ಚಾಲನೆ ನಿಡಲಾಗಿದ್ದು, ಕಾಮಗಾರಿಗಳ ವೇಗವನ್ನು ಹೆಚ್ಚಿಸಿ ಜನರಿಗೆ ಅನುಕೂಲ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ತಜ್ಞರ ಸಮಿತಿ ನೀಡಿರುವ ಸಲಹೆ ಸೂಚನೆಯಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸೂಚಿಸಲಾಯಿತು.

ಸಿಸಿ ರಸ್ತೆ –
ಸಿ.ಆರ್.ಎಫ್. ನಿಧಿಯಡಿ ಈಗಾಗಲೇ ಪೂರೈಸಿರುವ ರಸ್ತೆಗಳು ಇತ್ತೀಚಿನ ಮಳೆಯಿಂದ ಹಾಳಾಗಿದ್ದು ಅವುಗಳನ್ನು ಉತ್ತಮ ಗುಣಮಟ್ಟದ ರಸ್ತೆಗಳನ್ನಾಗಿ ಮಾಡುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚಿಸಿ, ಇಂಡಿ ಪಂಪ್‌ನಿಂದ ಉಣಕಲ್ಲ ಕ್ರಾಸ್ ವರೆಗಿನ ದ್ವಿಪಥ ರಸ್ತೆಯ ಕಾಮಗಾರಿಯ ಅಡಚಣೆಗಳನ್ನು ಬಗೆಹರಿಸಿ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಮತ್ತು ನಗರದಲ್ಲಿ ಹತ್ತು ಹಲವು ಕಡೆ ರಸ್ತೆ ಕಾಮಗಾರಿಗಳು ನಡೆಯುತ್ತಿವೆ, ಆದಷ್ಟು ಬೇಗ ಸಿಸಿ ರಸ್ತೆಗಳನ್ನು ಪೂರ್ಣಗೊಳಿಸಿ ಎರಡೂ ಬದಿಯಲ್ಲಿ ವಾಹನ ಓಡಾಟಕ್ಕೆ ಮುಕ್ತ ಮಾಡುವಂತೆ ಹೇಳಲಾಯಿತು.
ನಗರದಲ್ಲಿ ವಾಹನ ಓಡಾಟಕ್ಕೆ ಉತ್ತಮ ರಸ್ತೆಗಳನ್ನು ನಿರ್ಮಿಸಲು ವಿಶೇಷವಾಗಿ ಅಗತ್ಯವಿರುವ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಯವರಲ್ಲಿ ಕೋರಿದ್ದು, ಅವರು ಅನುದಾನ ನೀಡುವುದಾಗಿ ತಿಳಿಸಿದ್ದಾರೆ. ರಸ್ತೆ ಅಭಿವೃದ್ಧಿ ಕಾಮಗಾರಿ ಕುರಿತು ಹೆಚ್ಚಿನ ಆಸಕ್ತಿ ವಹಿಸಿ, ಈಗ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಯಿತು.

ಸ್ಮಾರ್ಟ್ ಸಿಟಿ ಯೋಜನೆ-
ಸ್ಮಾರ್ಟ ಸಿಟಿ ಕಾಮಗಾರಿಯ ವೇಗವನ್ನು ಹೆಚ್ಚಿಸಲು ಮತ್ತು ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಕಾಮಗಾರಿಗೆ ಭೂಮಿ ವಶಪಡಿಸಿಕೊಳ್ಳಲು ಈಗಾಗಲೇ ನೋಟಿಫಿಕೇಷನ್ ಹೊರಡಿಸಿದ್ದು ಕೂಡಲೇ ಟೆಂಡರ್ ಪ್ರಕ್ರಿಯೆ ಕಾಮಗಾರಿ ಪ್ರಗತಿಯಲ್ಲಿದ್ದು, ಈ ವಿಷಯವಾಗಿ ನಾನು ಕೇಂದ್ರ ಸಚಿವ ಶ್ರೀ ನಿತಿನ್ ಗಡ್ಕರಿಯವರಿಗೆ ದೂರವಾಣಿಯಲ್ಲಿ ಮಾತನಾಡಿ ಭೂಮಿ ಪೂಜೆಗೆ ಸಮಯ ನೀಡುವಂತೆ ಕೋರಿದ್ದೇನೆ.

ಬೆಳೆ ಪರಿಹಾರ –
ಜಿಲ್ಲೆಯಲ್ಲಿ ಇದುವರೆಗೆ ಎನ್.ಡಿ.ಆರ್.ಎಫ್. ೬೭ ಕೋಟಿ ರೂ. ಪರಿಹಾರವನ್ನು ೮೩ ಸಾವಿರ ರೈತರಿಗೆ ಬೆಳೆ ಪರಿಹಾರ ನೀಡಲಾಗಿದೆ. ಇನ್ನುಳಿದ ರೈತರಿಗೆ ಕೆಲವೇ ದಿನಗಳಲ್ಲಿ ಬೆಳೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.

ಕೋವಿಡ್ ಪರಿಹಾರ-
ಜಿಲ್ಲೆಯಲ್ಲಿ ಇದೂವರೆಗೆ ಕೋವಿಡ್‌ನಿಂದ ಮೃತಪಟ್ಟವ ಒಟ್ಟು ೧೨೦೯ ಕುಟುಂಬಗಳಲ್ಲಿ ಬಿಪಿಎಲ್ ಕುಟುಂಬಗಳು ೩೫೮, ಹಾಗೂ ಎಪಿಎಲ್ ಕುಟುಂಬಗಳು ೨೮೬ ಇದ್ದು, ಬಿಪಿಎಲ್ ಕುಟುಂಬಗಳಿಗೆ ೧.೫೦ ಲಕ್ಷ, ಎಪಿಎಲ್ ೫೦,೦೦೦ ರೂಗಳನ್ನು ಕೇಂದ್ರ ಸರಕಾರದಿಂದ ಬಿಡುಗಡೆ ಮಾಡಲಾಗಿದೆ. ಈಗಾಗಲೇ ೧೦೮ ಕುಟುಂಬಗಳಿಗೆ ಚೆಕ್ ವಿತರಿಸಲಾಗಿದೆ.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅರವಿಂದ ಬೆಲ್ಲದ, ಜಿಲ್ಲಾಧಿಕಾರಿ ಶ್ರೀ ನಿತೇಶ್ ಕುಮಾರ್ ಪಾಟೀಲ್, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಶ್ರೀ ಸುರೇಶ ಇಟ್ನಾಳ್, ಎನ್ ಡಬ್ಲು ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕರು ಶ್ರೀ ಗುರುದತ್ತ ಹೆಗಡೆ, ಸ್ಮಾರ್ಟ್ಸಿಟಿ ಮತ್ತು ಎನ್.ಹೆಚ್.ಎ.ಐ. ಅಧಿಕಾರಿಗಳು ಹಾಗೂ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ