ಒಮಿಕ್ರಾನ್ (omicron) ಆತಂಕದ ನಡುವೆಯೇ ರಾಜ್ಯದ ಶಾಲೆಗಳಲ್ಲಿ (schools) ಕೊರೊನಾ (Corona virus) ಅಬ್ಬರ ಹೆಚ್ಚಳವಾಗಿದ್ದು, ಭಾನುವಾರ ಒಂದೇ ದಿನ ಒಟ್ಟು 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೊಡಗಿನ 28 ವಿದ್ಯಾರ್ಥಿಗಳಿಗೆ ದಾವಣಗೆರೆಯ ನವೋದಯ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲೆಗಳನ್ನು ಸೀಲ್ ಡೌನ್ ಮಾಡಲಾಗಿದೆ.ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 19, ಮಡಿಕೇರಿಯ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ 9 ವಿದ್ಯಾರ್ಥಿಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ದೇವರಹಳ್ಳಿಯ ನವೋದಯ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.