ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದರೆ ಅತ್ತ ನಾಡದ್ರೋಹಿ ಎಂಇಎಸ್‍ನವರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸುತ್ತಿದ್ದರು. ಈ ಮಧ್ಯ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಮಸಿ ಬಳಿದಿರುವ ಘಟನೆ ನಡೆದಿದೆ.ಬೆಳಗಾವಿ ವ್ಯಾಕ್ಸಿನ್ ಡಿಪೆÇೀದಲ್ಲಿ ಈ ಘಟನೆ ನಡೆದಿದ್ದು. ಎಂಇಎಸ್ ಕಾರ್ಯಕರ್ತರು ಹಾಗೂ ಕರ್ನಾಟಕ ನವ ನಿರ್ಮಾಣ ಪಡೆ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಸಂಪತ್‍ಕುಮಾರ್ ದೇಸಾಯಿ ಮಸಿ ಬಳಿದಿದ್ದಾರೆ.

ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಸಂಪತ್‍ಕುಮಾರ್ ದೇಸಾಯಿ ಮಸಿ ಬಳಿದಿದ್ದಾರೆ.
ನಂತರ ಮಸಿ ಬಳಿದ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಸಂಪತ್‍ಕುಮಾರ್ ದೇಸಾಯಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ವೇಳೆ ಪೊಲೀಸ್ ವಾಹನದ ಮೇಲೆ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು ಯತ್ನಿಸಿದರು. ಇದರಿಂದ ಪೆÇಲೀಸರು ಹಾಗೂ ಎಂಇಎಸ್ ಕಾರ್ಯಕರ್ತ ನಡುವೆ ಗಲಾಟೆ ನಡೆದಿದೆ.