ಬೆಳಗಾವಿ ಅಧಿವೇಶನದ ವೇಳೆ ರಾಜ್ಯ ಸರಕಾರ ಜಾರಿಗೆ ತಂದ ರೈತವಿರೋಧಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮುಂದಾದರು.
ಸರಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕೂಡಿಹಳ್ಳಿ ಚಂದ್ರಶೇಖರ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೂಲ್ ಗೆ ಆಗಮಿಸಿದರು. ರೈತರ ಮತ್ತು ಪೆÇೀಲಿಸರ ಜೊತೆ ಮಾತುಕತೆ ನಡೆಸಿದ ರಾಜ್ಯಾಧ್ಯಕ್ಷ 10 ಗಂಟೆಗೆ ಹಿರೇಬಾಗೇವಾಡಿ ಯಲ್ಲಿರುವ ಬಸವೇಶ್ವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ಪಾದ ಯಾತ್ರೆ ಆರಂಭ ಮಾಡಿದರು.