ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನ ಹಿನ್ನೆಲೆಯಲ್ಲಿ ರೈತರು ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ.
ರಾಜ್ಯ ಸರಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ.
ಇಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಟೋಲ್ ನಿಂದ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡುವ ಮೂಲಕ ಪಾದಯಾತ್ರೆ ನಡೆಸಿದ ರೈತರು ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು.