Breaking News

ಲಾಕ್ ಡೌನ್ ಸಂಧರ್ಭದಲ್ಲಿ ಕೂಡ ಸರ್ಕಾರ ಮೇದಾರ ಸಮಾಜಕ್ಕೆ ಯಾವುದೇ ಆರ್ಥಿಕ ಸಹಾಯ ನೀಡಿಲ್ಲ.

Spread the love

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಮೇದಾರ ಸಮಾಜ ಒಕ್ಕೂಟ ವತಿಯಿಂದ ಸುವರ್ಣ ಗಾರ್ಡನ್ ನಲ್ಲಿ ಮನವಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು. ಜಿಲ್ಲೆಯ ಸಮಸ್ತ ಮೇದಾರ ಸಮಾಜದ ಕುಲಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಮಾಜದ ಮುಖಂಡರು ಮನವಿ ಮಾಡಿಕೊಂಡರು.

ಸೋಮವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮೇದಾರ ಸಮಾಜದ ಮುಖಂಡರಾದ ಮಲ್ಲೇಶಿ ಕೊರಡೆ ಅವರು ಮೇದಾರ ಸಮಾಜ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ,ಹಾಗೂ ರಾಜಕೀಯವಾಗಿ ಹಿಂದುಳಿದಿದೆ.ಆದ್ದರಿಂದ ಸಮಾಜದ ಶ್ರೇಯೋಭಿವೃದ್ದಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಲು ಮಂಗಳವಾರ ಸುವರ್ಣ ಸೌಧ ಬಳಿ ಇರುವ ಸುವರ್ಣ ಗಾರ್ಡನ್ ನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಬಳಿಕ ಯುವ ಮುಖಂಡ ಗೌತಮ್ ಕುಕಡೆ ಮಾತನಾಡಿ ಗುಡಿಕೈಗಾರಿಕೆ ನಂಬಿಕೊಂಡು ಬದುಕುತ್ತಿರುವ ಮೇದಾರ ಸಮುದಾಯಕ್ಕೆ ಸರ್ಕಾರ ವತಿಯಿಂದ ಯಾವುದೇ ಸೌಲತ್ತುಗಳು ದೊರೆಯುತ್ತಿಲ್ಲ.ಲಾಕ್ ಡೌನ್ ಸಂಧರ್ಭದಲ್ಲಿ ಕೂಡ ಸರ್ಕಾರ ಮೇದಾರ ಸಮಾಜಕ್ಕೆ ಯಾವುದೇ ಆರ್ಥಿಕ ಸಹಾಯ ನೀಡಿಲ್ಲ.ಆದ್ದರಿಂದ ನಾವು ಒಕ್ಕೊರಲಿನಿಂದ ಹೋರಾಡಿದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬಹುದು ಆದ್ದರಿಂದ ಸಮಾಜದ ಮುಖಂಡರು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ. ಕುಲಭಾಂದವರಿಗೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮೇದಾರ ಸಮಾಜದ ಮುಖಂಡರಾದ ಪ್ರಕಾಶ ನೇಸರಿಕರ, ರಾಜು ಗೋಕಾಕ್, ಪ್ರಕಾಶ ಹಜಗೋಳಕರ, ವಿಜಯ ಕಾಕತಿಕರ, ಸಾಗರ ಬೆಳಗಾವಂಕರ, ಪ್ರಬಾಕರ ಕಾಕತಿಕರ, ಸಿದ್ದಪ್ಪ ನೇಸರಿಕರ, ಲಕ್ಷ್ಮಣ ಬುರುಡ ಸೇರಿದಂತೆ ಇತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ