ಕಾಂಗ್ರೆಸ್ ಪಕ್ಷ ಬೆಳಗಾವಿಯಲ್ಲಿ ಗಟ್ಟಿಯಾಗಿದೆ. ಮುಂಬರುವ ಚುನಾವಣೆಗಳನ್ನು ಎಲ್ಲರ ಒಗ್ಗಟ್ಟಿನಿಂದ ಗೆಲ್ಲಿಸುತ್ತೇವೆಂಬ ಸಂದೇಶವನ್ನು ಈ ಚುನಾವಣೆ ಮೂಲಕ ನೀಡುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಪರಿಷತ್ ಚುನಾವಣೆ ಗೆದ್ದೆ ಗೆಲ್ಲುತ್ತೇವೆ ಎಂಬ ವಿಶ್ವಾಸ ಇತ್ತು. ಅದೇ ರೀತಿಯಾಗಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಎರಡನೇ ಪ್ರಾಶಸ್ತ್ಯ ಬಿಜೆಪಿ, ಪಕ್ಷೇತರ ಅಭ್ಯರ್ಥಿ ಯಾರೇ ಬಂದ್ರು ಕಾಂಗ್ರೆಸಗೆ ಲಾಭವೂ ಇಲ್ಲ. ನಷ್ಟವೂ ಇಲ್ಲ. ನಮಗೆ ಸಂಬಂಧ ಪಡುವುದಿಲ್ಲ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷವನ್ನೂ ಸೋಲಿಸಲೇಬೇಕೆಂದು ಎದುರಾಳಿಗಳು ಪಣ ತೊಟ್ಟಿದ್ದರು, ಇನ್ನೊಂದೆಡೆ ಪಕ್ಷದ ಹಾಲಿ, ಮಾಜಿ ಶಾಸಕರು, ಮುಖಂಡರು ಕೈ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂಬ ಹಠ ತೊಟ್ಟಿದ್ದರು. ಒಗ್ಗಟ್ಟಿಗೆ ಜಯ ದೊರೆತಿದೆ. ‘ ಕೈ’ ನಾಯಕರ, ಮುಖಂಡರ ಕಾರ್ಯಕ್ಕೆ ಪ್ರತಿಫಲ ಸಿಕ್ಕಿದೆ ಎಂದು ಹೇಳಿದ್ದಾರೆ.