Breaking News

ಬೆಳಗಾವಿಯಲ್ಲಿಪಂಚಮಸಾಲಿ ಸಮಾಜದ ಜೊತೆಗೆ ಸಿಎಂ ಬೊಮ್ಮಾಯಿ ಮಿಟಿಂಗ್

Spread the love

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ.  ಸಿಎಂ ಬೊಮ್ಮಾಯಿ ಅವರ ಉಪಸ್ಥಿತಿಯಲ್ಲಿ ಪಂಚಮಸಾಲಿ ಸಮಾಜದ ಹಾಲಿ, ಮಾಜಿ ಶಾಸಕರು, ಮುಖಂಡರ ಸಭೆಯನ್ನು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಕರೆದಿದ್ದಾರೆ.

ಬೆಳಗಾವಿ ಹೊರ ವಲಯದಲ್ಲಿರುವ ಮೇರಿಟ್ ಹೋಟೆಲ್‍ನಲ್ಲಿ ಸಂಜೆ 7 ಗಂಟೆಗೆ ಸಭೆ ಕರೆಯಲಾಗಿದೆ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ವಿಳಂಬದ ಹಿನ್ನೆಲೆಯಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಡ ಹೇರಲು ಪಂಚಮಸಾಲಿ ಸಮಾಜದ ಹಾಲಿ ಹಾಗೂ ಮಾಜಿ ಜನಪ್ರತಿನಿಧಿಗಳ ಸಭೆಯನ್ನು ಕರೆಯಲಾಗಿದೆ. ಸಭೆಯ ದಿವ್ಯ ಸಾನಿಧ್ಯವನ್ನು ಪಂಚಮಸಾಲಿ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಹಿಸಲಿದ್ದಾರೆ. ಸಭೆಯಲ್ಲಿ ಸಿಎಂ ಬೊಮ್ಮಾಯಿ ಅವರು ಭಾಗಿಯಾಗಲಿದ್ದಾರೆ ಎಂದು ಪಂಚಮಸಾಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ