Breaking News

ಕನ್ನಡ ದ್ವಜ ಸುಟ್ಟು ಹಾಕಿದ ಎಂ.ಇ.ಎಸ್ ಪುಂಡರ ವಿರುದ್ಧ ಸೂಕ್ತ ಕ್ರಮಕ್ಕೆ ಕನ್ನಡಪರ ಸಂಘಟನೆಗಳ ವತಿಯಿಂದ ಆಗ್ರಹ*

Spread the love

ಘಟಪ್ರಭಾ; ನಾಡ ದ್ರೋಹಿ ಎಂ.ಇ.ಎಸ್ ಸಂಘಟನೆಯನ್ನು ನಿಷೇದಿಸುವಂತೆ ಹಾಗೂ ಕೊಲ್ಹಾಪುರದಲ್ಲಿ ಕನ್ನಡ ದ್ವಜ ಸುಟ್ಟಂತಹ ನಾಡ ದ್ರೋಹಿಗಳ ವಿರುದ್ದ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ಘಟಪ್ರಭಾ ನಗರದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ವತಿಯಿಂದ ಮೃತ್ಯುಂಜಯ ವೃತ್ತದಲ್ಲಿ ಟೈರಗೆ ಬೆಂಕಿ ಹಚ್ಚಿ ನಾಡ ದ್ರೋಹಿಗಳ ವಿರುದ್ದ ಆಕ್ರೋಶ ವ್ಯಕ್ತ ಪಡಿಸಲಾಯಿತು.

ಈ ಸಂದರ್ಭದಲ್ಲಿ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೆಂಪಣ್ಣ ಚೌಕಾಶಿ, ಕರ್ನಾಟಕ ರಕ್ಷಣಾ ವೇದಿಕೆ ಸಂತೋಷ ಅರಳಿಕಟ್ಟಿ ಬಣ ದ ರಾಜ್ಯಾಧ್ಯಕ್ಷ ಪ್ರಶಾಂತ ಅರಳಿಕಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಗೋಕಾಕ ತಾಲೂಕಾಧ್ಯಕ್ಷ ಸಂತೋಷ ಕಂಡ್ರಿ, ಕನ್ನಡ ಸೇನೆ ತಾಲೂಕಾಧ್ಯಕ್ಷ ಅಪ್ಪಾಸಾಹೇಬ ಮುಲ್ಲಾ, ಕನ್ನಡ ರಕ್ಷಣಾ ವೇದಿಕೆ ಗೋಕಾಕ ತಾಲೂಕಾಧ್ಯಕ್ಷ ಮಾರುತಿ ಚೌಕಾಶಿ, ಶ್ರೀಕಾಂತ ಮಹಾಜನ, ಸುರೇಶ ಚಿಗಡ್ಡೊಳಿ, ನಾರಾಯನ ಜಡಕೀನ, ಶಿವಾನಂದ ಪಡದಾಳೆ, ಸಿದ್ದರಾಮ ಮುಪಗಾರ. ಭೀಮಶಿ ಬೆಳಗಲಿ, ಭೀಮಶಿ ಪುಜೇರಿಪುಜೇರಿ ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೋಟ ಮೂಲಕ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ‌ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

Spread the love ಬೋಟ ಮೂಲಕ ಪ್ರವಾಹ ಪರಿಸ್ಥಿತಿ ಅವಲೋಕಿಸಿದ ‌ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ