Breaking News

ಆಸೆ, ಆಮಿಷಗಳಿಗೆ ಒಳಗಾಗಿ ಮತಾಂತರ ಆಗುವುದು ತಪ್ಪು – ಬೊಮ್ಮಾಯಿ.!

Spread the love

ಹುಬ್ಬಳ್ಳಿ : ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಆಸೆ, ಆಮಿಷಗಳಿಗೆ ಒಳಗಾಗಿ ಮತತಾಂತರವಾಗುವುದು ತಪ್ಪು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ನಗರದಲ್ಲಿ ತಮ್ಮ ನಿವಾಸದ ಹತ್ತಿರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಯಾವುದೇ ಧರ್ಮದವರು ಆತಂಕ ಪಡಬಾರದು.

ಇದರಿಂದ ಅನ್ಯ ಧರ್ಮದ ಪ್ರಾರ್ಥನೆ, ನಂಬಿಕೆಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಹೇಳಿದ್ದಾರೆ.

ಈಗಾಗಲೇ ಬೇರೆ ರಾಜ್ಯಗಳಲ್ಲಿ ಮತಾಂತರ ಕಾಯ್ದೆ ಜಾರಿಯಾಗಿದೆ. ಕಾನೂನು ಇಲಾಖೆ ಇವುಗಳ ಕುರಿತು ಅಧ್ಯಯನ ನಡೆಸಿದೆ. ಪರಿಶೀಲನೆಯ ನಂತರ ಅದನ್ನು ಕ್ಯಾಬಿನೆಟ್ ಗೆ ತರುತ್ತೇವೆ. ಮತಾಂತರದಿಂದ ಸಮಾಜಕ್ಕೆ ದೊಡ್ಡ ಪೆಟ್ಟು ನೀಡುತ್ತದೆ ಎಂಬ ಕಾರಣಕ್ಕೆ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಹೊರಟಿದ್ದೇವೆ ಎಂದು ಹೇಳಿದ್ದಾರೆ.

2 ವರ್ಷಗಳ ನಂತರ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ. ಇದಕ್ಕಾಗಿ ಎಲ್ಲ ತಯಾರಿ ನಡೆಸಿದ್ದೇವೆ. ನಮ್ಮ ಸರ್ಕಾರ ಅಭಿವೃದ್ಧಿ ಪರವಾಗಿ ಇದೆ. ವಿರೋಧ ಪಕ್ಷಗಳ ಚರ್ಚೆಗೆ ನಾವು ಸಿದ್ಧ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ