ಬೆಳಗಾವಿ : ಹೊಸ ವರ್ಷಕ್ಕೆ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ (Good news for farmers) ನೀಡಿದ್ದು, ಜನವರಿ 1 ರಿಂದ (January 1) ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ, ಜೋಳ (Paddy, ragi, corn) ಖರೀದಿಸಲಾಗುವುದು ಎಂದು ಸಚಿವ ಉಮೇಶ್ ಕತ್ತಿ (Minister Umesh Kaththi) ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಉಮೇಶ್ ಕತ್ತಿ, ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗಿದ್ದು, ರೈತರು ತಮ್ಮ ಆಹಾರ ಧಾನ್ಯಗಳನ್ನು ಮಾರಾಟ ಮಾಡದೆ ಉಳಿಸಿಕೊಳ್ಳುವುದು ಉತ್ತಮ ಎಂದು ತಿಳಿಸಿದ್ದಾರೆ.
ನವೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭತ್ತದ ಕಟಾವು ವಿಳಂಬವಾಗಿದೆ. ಹೀಗಾಗಿ ಜನವರಿ 1 ರಿಂದ ಖರೀದಿ ಕೇಂದ್ರಗಳಲ್ಲಿ ಭತ್ತ ಖರೀದಿ ಆರಂಭವಾಗಲಿದೆ ಎಂದು ಹೇಳಿದ್ದಾರೆ.