Breaking News

ಮಧ್ಯರಾತ್ರಿ ದುಷ್ಕರ್ಮಿಗಳು ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಭಗ್ನಗೊಳಿಸಿದ್ದಾರೆ.

Spread the love

ಇಲ್ಲಿಯ ಆನಗೋಳದಲ್ಲಿ ಇಡಲಾಗಿದ್ದ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಮಧ್ಯರಾತ್ರಿ ದುಷ್ಕರ್ಮಿಗಳು ಭಗ್ನಗೊಳಿಸಿದ್ದಾರೆ. ಇದರಿಂದಾ ಆಕ್ರೋಶಗೊಂಡ ರಾಯಣ್ಣ ಅಭಿಮಾನಿಗಳು ಪೊಲೀಸ್ ಠಾಣೆ ಎದುರು ಜಮಾಯಿಸಿದ್ದಾರೆ.

ರಾತ್ರಿ 2.30ರ ಹೊತ್ತಿಗೆ ಬಂದ ನಾಲ್ವರು ದುಷ್ಕರ್ಮಿಗಳು ಮೂರ್ತಿಯ ಡಾಲ್ ಮುರಿದಿದ್ದು, ಖಡ್ಗವನ್ನೂ ಕಿತ್ತು ಹಾಕಿದ್ದಾರೆ. ರಾಯಣ್ಣ ಮುಖದ ಮೇಲೆಲ್ಲ ರಾಡ್ ನಿಂತ ಡ್ಯಾಮೇಜ್ ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಸುದ್ದಿ ಹರಡುತ್ತಿದ್ದಂತೆ ಅಲ್ಲಿಯ ಜನ ಸೇರತೊಡಗಿದರು. ಈಗ ಅಲ್ಲಿನ ಯುವಕರು ಟಿಳಕವಾಡಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದಾರೆ. ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಇದೀಗ ಮೂರ್ತಿಯನ್ನು ಟಿಳಕವಾಡಿ ಠಾಣೆ ಪೊಲೀಸರು  ಒಯ್ದಿದ್ದು, ಸ್ಥಳೀಯ ಯುವಕರು ಠಾಣೆ ಬಳಿ ಸೇರುತ್ತಿದ್ದಾರೆ.

ರಾಯಣ್ಣ ಜಯಂತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಬಳಸಲೆಂದು ಸ್ಥಳೀಯ ರಾಯಣ್ಣ ಸೇನಾ ಯುವಕಸಂಘದವರು 8 ಅಡಿ ಎತ್ತರದ ಭವ್ಯವಾದ ರಾಯಣ್ಣ ಮೂರ್ತಿ ತಯಾರಿಸಿದ್ದರು. ಅದನ್ನು ಅಲ್ಲಿಯ ಮನೆಯೊಂದರ ಮುಂದೆ ನಿಲ್ಲಿಸಿಡಲಾಗಿತ್ತು. ಕಾರ್ಯಕ್ರಮಗಳಿಗೆ ಬೇಕಾದಾಗ ಬಳಸಲಾಗುತ್ತಿತ್ತು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ