Breaking News

ಬೆಳಗಾವಿಯಲ್ಲಿ ಪುಂಡಾಟಿಕೆ;ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ

Spread the love

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಷ್ಟ್ರಭಕ್ತರ ಪ್ರತಿಮೆಗಳನ್ನು ಧ್ವಂಸಗೊಳಿಸುವುದು ಸರಿಯಲ್ಲ. ಕೆಲವೇ ಕಲ ಪುಂಡರು ಈ ರೀತಿ ಮಾಡುತ್ತಿದ್ದಾರೆ. ಅಂತವರನ್ನು ಸದೆಬಡಿಯುವುದಾಗಿ ತಿಳಿಸಿದರು.

ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದರು.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ