Breaking News

ಬೆಳಗಾವಿಯಲ್ಲಿ ಸೆಕ್ಷನ್ 144 ಕಿಡಿಗೇಡಿಗಳನ್ನು ಸುಮ್ಮನೆ ಬಿಡಲ್ಲ: ಅರಗ ಜ್ಞಾನೇಂದ್ರ

Spread the love

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಧ್ವಂಸ ಹಾಗೂ ಕಿಡಿಗೇಡಿಗಳಿಂದ ವಾಹನಗಳ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸರಿಗೆ ಸೂಚಿಸಿದ್ದಾರೆ.

 

ಈ ಕುರಿತು ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಬೆಳಗಾವಿಯಲ್ಲಿ ಕೆಲ ಪುಂಡರು ಈ ರೀತಿ ಮಾಡುತ್ತಿದ್ದಾರೆ. ಕಿಡಿಗೇಡಿಗಳ ಪುಂಡಾಟವನ್ನು ಹತ್ತಿಕ್ಕಬೇಕಾದ ಅಗತ್ಯವಿದೆ. ಈಬಾರಿ ತಪ್ಪಿತಸ್ಥರಿಗೆ ಭಯ ಹುಟ್ಟಿಸುತ್ತೇವೆ. ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಪೊಲೀಸರು ಕೈಗೊಳ್ಳುವ ಕ್ರಮದ ಬಗ್ಗೆ ಕಾದು ನೋಡಿ ಎಂದು ಹೇಳಿದ್ದಾರೆ

ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿರುವ ನಡುವೆಯೇ ಕುಂದಾನಗರಿ ಬೆಳಗಾವಿಯಲ್ಲಿ ಹಿಂಸಾಚಾರ ನಡೆದಿದ್ದು, ಆನಗೋಳದಲ್ಲಿ ರಾಯಣ್ಣ ಪ್ರತಿಮೆ ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದಾರೆ. ಅಲ್ಲದೇ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ 27 ಆರೋಪಿಗಳನ್ನು ಬಂಧಿಸಲಾಗಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ