ಅಥಣಿ: ಅಥಣಿ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಇಂದು ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಅಥಣಿಯಲ್ಲಿ ಕಾರ್ಯನಿವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು ಅಲ್ಲದೇ ವಿದ್ಯಾಲಯದ ಕಾಮಗಾರಿಗಳು ಸಹ ನಿಧಾನಗತಿಯಲ್ಲಿ ನಡೆಯುತ್ತಿರುವುದು ಗಮನಕ್ಕೆ ಬಂದಿತ್ತು ಈ ಕುರಿತಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಗಮನಕ್ಕೆ ತಂದಿದ್ದು ಈ ಕುರಿತಾಗಿ ಬೆಂಗಳೂರಿನಲ್ಲಿ ಸಭೆ ಸಹ ನಡೆಸಲಾಗಿತ್ತು ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದರು
ಕೆಲವು ಹೊಸ ಕಾಮಗಾರಿಗಳು ಟೆಂಡರ್ ಹಂತದಲ್ಲಿದ್ದು ಸದ್ಯದಲ್ಲೇ ಅಭಿವೃದ್ಧಿ ಕೆಲಸಗಳು ಆರಂಭ ಅಗಲಿವೆ ಎಂದು ಸಚಿವರು ಹೇಳಿದ್ದಾರೆ. ಈ ಹಿಂದಿನ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವರು ಗುಣಮಟ್ಟದ ಕೆಲಸ ನಡೆಯಬೇಕು ಯಾವುದೇ ನೆಪ ಒಡ್ಡಿ ಕುಂಠಿತವಾದರೆ ಮತ್ತು ಗುಣಮಟ್ಟ ಇಲ್ಲದಿದ್ದರೆ ಶಿಸ್ತು ಕ್ರಮ ಕೈಗುಳುವುದಾಗಿ ಸಚಿವರು ಹೇಳಿದ್ದಾರೆ. ಮಹಾವಿದ್ಯಾಲಯದ ಅಧಿಕಾರಿಗಳು ಕಟ್ಟಡ ನಿರ್ಮಾಣ ಕಾಮಗಾರಿ ಮೇಲೆ ನಿಗಾವಹಿಸಿ ಕಳಪೆ ಕಾಮಗಾರಿ ಆಗದಂತೆ ನೋಡಿಕೊಳ್ಳಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಥಣಿಯ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚುವರಿಯಾಗಿ ರೂ.36 ಕೋಟಿ ಈ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು ಕಾಮಗಾರಿಗಳು ವೇಗ ಪಡೆದುಕೊಂಡಿವೆ ಎಂದು ಅವರು ಹೇಳಿದರು. ಶ್ರೀಘ್ರವಾಗಿ ಕಟ್ಟಡ ಕಾಮಗಾರಿ ಮುಗಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಡೆಯಿಂದ ಉದ್ಘಾಟನೆ ಮಾಡಿಸಲಾಗುವು ಎಂದು ಅವರು ಹೇಳಿದರು.