Breaking News

ಬೈಕ್ ಮೇಲಿಂದ ಸ್ಕೀಡ್ ಆಗಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.

Spread the love

ನಗರದ ಗಬ್ಬೂರು ಬೈಪಾಸ್ ಬಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಬೈಕ್ ಮೇಲಿಂದ ಸ್ಕೀಡ್ ಆಗಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ದಾಖಲಾಗಿದ್ದರೂ, ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದಾರೆ.

ಹುಬ್ಬಳ್ಳಿಯ CAR ಹೆಡ್ ಕ್ವಾಟರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ ಪಾಟೀಲ ಎಂಬ ಪೊಲೀಸ್, ಅದರಗುಂಚಿಯಿಂದ ಹುಬ್ಬಳ್ಳಿಗೆ ಕರ್ತವ್ಯಕ್ಕೆ ಹಾಜರಾಗುವ ವೇಳೆಯಲ್ಲಿ ಬೈಕ್ ಸ್ಕೀಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.

ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ, ನಂತರ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ತಲೆಗೆ ಗಂಭೀರವಾದ ಪೆಟ್ಟು ಬಿದ್ದ ಪರಿಣಾಮ, ಚಿಕಿತ್ಸೆ ಫಲಿಸದೇ ಕಿರಣ ಪಾಟೀಲ್ ಸಾವಿಗೀಡಾಗಿದ್ದಾರೆ.

ಕಿರಣ ಪಾಟೀಲ ಅವರಿಗೆ ಫೀಡ್ಸ್ ಬಂದ ಕಾರಣದಿಂದಲೇ ಹೀಗಾಗಿತ್ತು ಹೇಳಲಾಗಿತ್ತು. ತದನಂತರ ಅವರನ್ನ ಬದುಕಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದ ಹಿಂದೆ ಘಟನೆ ನಡೆದಿತ್ತು.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ