Breaking News

ಡಿ. 24 ರಿಂದ ಜ. 1 ರವರೆಗೆ ಚಳಿಗಾಲದ ರಜೆ ಘೋಷಣೆ: ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳಿಗೆ ರಜೆ

Spread the love

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಆದೇಶದ ಅನುಸಾರ ನ್ಯಾಯಾಂಗ ರಿಜಿಸ್ಟ್ರಾರ್ ಕೆ.ಎಸ್. ಭರತ್ ಕುಮಾರ್ ನೋಟಿಫಿಕೇಶನ್ ಹೊರಡಿಸಿದ್ದಾರೆ.

ಡಿಸೆಂಬರ್ 24 ರಿಂದ ಜನವರಿ 1 ರ ವರೆಗೆ ಹೈಕೋರ್ಟ್ ನ ಬೆಂಗಳೂರು ಪ್ರಧಾನ ಪೀಠ, ಕಲಬುರ್ಗಿ ಮತ್ತು ಧಾರವಾಡ ಪೀಠಗಳಿಗೆ ಚಳಿಗಾಲದ ರಜೆ ಇರುತ್ತದೆ.

ರಜೆ ಅವಧಿಯಲ್ಲಿ ದೈನಂದಿನ ಕಲಾಪಗಳು ನಡೆಯುವುದಿಲ್ಲ. ಡಿಸೆಂಬರ್ 27 ರಂದು ಬೆಂಗಳೂರು ಪ್ರಧಾನ ಪೀಠದಲ್ಲಿ ರಜಾ ಕಾಲದ ನ್ಯಾಯಪೀಠಗಳು ನಡೆಯಲಿದ್ದು, ತುರ್ತು ಪ್ರಕರಣಗಳನ್ನು ವಿಚಾರಣೆಗೆ ಪರಿಗಣಿಸಲಾಗುತ್ತದೆ. ಕಲಬುರ್ಗಿ ಮತ್ತು ಧಾರವಾಡದ ಹೈಕೋರ್ಟ್ ನ್ಯಾಯಪೀಠದಲ್ಲಿ ರಜಾ ಕಾಲದ ಪೀಠಗಳು ಕಾರ್ಯನಿರ್ವಹಿಸುವುದಿಲ್ಲ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ