ಹಾವೇರಿ – ಮುಖ್ಯಮಂತ್ರಿಗಳು ಶ್ರೀ ಬಸವರಾಜ ಬೊಮ್ಮಾಯಿ ಭಾನುವಾರ ಶಿಗ್ಗಾವದಲ್ಲಿ ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ಪುತ್ತಳಿಯನ್ನು ಹೂ ಮಾಲೆ ಹಾಕುವುದರ ಮೂಲಕ ಲೋಕಾರ್ಪಣೆ ಮಾಡಿದರು.
ನಂತರ ಪಂಚಮಸಾಲಿ ಸಮಾಜದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ದೀಪ ಬೇಳಗುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವರುಗಳಾದ ಮುರುಗೇಶ್ ನಿರಾಣಿ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರುಗಳು ಬಸವಗೌಡ ಪಾಟೀಲ್ ಯತ್ನಾಳ್, ಪಂಚಮಸಾಲಿ ಹರಿಹರ ಪೀಠದ ವಾಚನಾನಂದ ಸ್ವಾಮೀಜಿ, ಹಾಗೂ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಹಾಗೂ ಅನೇಕ ಗಣ್ಯರು ಸಮಾರಂಭದಲ್ಲಿ ಉಪ್ಥಿತರಿದ್ದರು.